ಉದಯವಾಹಿನಿ ಮುದಗಲ್ : ಪಟ್ಟಣದ ಗಣೇಶ್ ಪ್ರತಿಷ್ಠಾಪನೆ ನಿಮಿತ್ತ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್ ಬಿ. ವಿವಿಧ ಸ್ಥಳಗಳನ್ನು ಭೇಟಿ ನೀಡಿ ಮಂಗಳವಾರ ಪರಿಶೀಲಿಸಿದರು.ಪಟ್ಟಣದ ವೆಂಕಟರಾಯನಪೇಟೆಯಲ್ಲಿ ಗಣೇಶ ವಿಸರ್ಜನೆ ಮಾಡುವ ಬಾವಿ, ಕೆರೆ ಹಾಗೂ ವಿವಿಧಡೆಯ  ಮಸ್ಕಿ ರಸ್ತೆಯ ಸಿ.ಸಿ ಕ್ಯಾಮರಗಳನ್ನು ಅಳವಡಿಸಿರುವ ಸ್ಥಳಗಳನ್ನು ಪರಿಶೀಲಿಸಿದರು.
ವಿವಿಧ ಪ್ರಕರಣಗಳ ಬೈಕ್‌, ಇತರ ವಾಹನಗಳನ್ನು ಹಾಗೂ ಠಾಣೆಯ ಇತರ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಿ ಮಾಹಿತಿ ಪಡೆದುಕೊಂಡರು. ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ, ಗಣೇಶ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಲಾಗುವುದು. ಅವಶ್ಯ ಬಿದ್ದರೆ ಬೇರೆ ಕಡೆಯಿಂದ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಹಾಗೂ ಹಲವೆಡೆ ಇನ್ನು ಹೆಚ್ಚಿನ ಸಿ.ಸಿ ಕ್ಯಾಮರಾ ಜೋಡಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಸಾರ್ವಜನಿಕರ ಪ್ರೋತ್ಸಾಹ ಮುಖ್ಯ. ಅಧಿಕಾರಿಗಳು ಸತತ ಪ್ರಯತ್ನ ಮಾಡುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆ ನಿವಾರಣೆಯಲ್ಲಿ ನಮ್ಮ ಸಹಕಾರವಿದೆ ಎಂದರು.

Leave a Reply

Your email address will not be published. Required fields are marked *

error: Content is protected !!