ಉದಯವಾಹಿನಿ, ಔರಾದ್ : ಸದೃಢ ಸಮಾಜಕ್ಕೆ ಪೌಷ್ಟಿಕ ಆಹಾರ ಸೇವಿಸಬೇಕು. ಮಹಿಳೆಯರು ಉತ್ತಮ ವಿಟಮಿನ್ಗಳಿರುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸಿಕೊಂಡು ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂತಪುರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಹೇಳಿದರು. ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ಬುದುವಾರ ಸಂತಪುರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ ಮಾಹೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೇಲ್ವಿಚಾರಕಿ ವಿಜಯಲಕ್ಷ್ಮಿ ಮಾತನಾಡಿ, ಪೋಷಣೆ ಯೋಜನೆಯಲ್ಲಿ ಮುಖ್ಯವಾಗಿ ಗರ್ಭಿಣಿಯರು, ಬಾಣಂತಿಯರು, ಶಿಶುವಿನ ಬೆಳವಣಿಗೆ ಕುಂಠಿತ, ತೂಕ ಕೊರತೆಯ, ರಕ್ತ ಹೀನತೆ ,ಕಡಿಮೆ ತೂಕದ ಶಿಶು ಸೇರಿದಂತೆ ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವವರು ಉತ್ತಮ ಆರೋಗ್ಯಕ್ಕಾಗಿ ಮಕ್ಕಳ ಕಲ್ಯಾಣ ಇಲಾಖೆ ನಾನಾ ರೀತಿಯ ಯೋಜನೆಗಳನ್ನು ಜಾರಿಗೆ ಗೊಳಿಸಿದೆ .ಪ್ರತಿಯೊಬ್ಬರು ಈ ಯೋಜನೆಗಳನ್ನು ಸದುಪ ಪಡಿಸಿಕೊಂಡು ಹಂತ ಹಂತವಾಗಿ ಅಪೌಷ್ಟಿಕತೆ ಮುಕ್ತ ಕರ್ನಾಟಕ ಹಾಗೂ ಅಪೌಷ್ಟಿಕತೆ ಮುಕ್ತ ರಾಷ್ಟ್ರಕ್ಕಾಗಿ ಕೈಜೋಡಿಸಬೇಕು ಎಂದರು. ಗ್ರಾಪಂ ಸದಸ್ಯ ಇಸ್ಮಾಯಿಲ್ ಮಾತನಾಡಿ, ಅಪೌಷ್ಟಿಕತೆಯು ಮಕ್ಕಳಿಗೆ ಹಾಗೂ ತಾಯಂದರಿಗೆ ಮಾರಕವಾಗಿದೆ ಹಾಗಾಗಿ ಪ್ರತಿಯೊಬ್ಬರೂ ಅಪೌಷ್ಟಿಕತೆ ನಿವಾರಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಸಂತೋಷ್, ಮುಖ್ಯ ಶಿಕ್ಷಕ ಶಿವಪುತ್ರ ನೌನಾಥ, ಅಂಗನವಾಡಿ ಕಾರ್ಯಕರ್ತೇಯರ ಸಿ ಐ ಟಿ ಯು ಸಂಘಟನೆಯ ಅಧ್ಯಕ್ಷೆ ಪದ್ಮಾವತಿ, ಹೆಡಗಾಪೂರ ವಲಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಸುಧಾರಾಣಿ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!