
ಉದಯವಾಹಿನಿ ದೇವರಹಿಪ್ಪರಗಿ: ಅಕ್ಷರ ಕಲಿಯುವುದು ಮಾತ್ರ ಶಿಕ್ಷಣವಲ್ಲ. ಶಿಸ್ತು ಮತ್ತು ಸಂಸ್ಕಾರ ಕಲಿಯುವುದು ನಿಜವಾದ ಶಿಕ್ಷಣ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.ತಾಲೂಕಿನ ಪಡಗಾನೂರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರದಂದು ನಡೆದ ದೇವರಹಿಪ್ಪರಗಿ ವಲಯದ ಮಕ್ಕಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರತಿಭಾ ಕಾರಂಜಿ ಹಮ್ಮಿಕೊಳ್ಳಲಾಗಿದೆ. ಕಲಿಕೆ ಕೇವಲ ಅಕ್ಷರಜ್ಞಾನವಷ್ಟೇ ಅಲ್ಲ; ಸಾಂಸ್ಕ್ರಂತಿಕ ಕಲಿಕೆಯೂ ಬಹಳ ಮುಖ್ಯ. ಮಕ್ಕಳಲ್ಲಿರುವ ಸೃಜನಾತ್ಮಕ ಶಕ್ತಿಯನ್ನು ಗುರುತಿಸಿ ಅದಕ್ಕೆ ತಕ್ಕಂತಹ ವಾತಾವರಣವನ್ನು ನಿರ್ಮಿಸುವ ಅವಶ್ಯಕತೆ ಇದೆ. ಮಕ್ಕಳು ಪ್ರತಿಭೆ ಹೊರಹಾಕಲು ಪ್ರತಿಭಾಕಾರಂಜಿ ಉತ್ತಮ ವೇದಿಕೆಯಾಗಿದ್ದು, ಬರುವಂತ ದಿನಗಳಲ್ಲಿ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಗ್ರಾಮದ ಹೆಸರು ತರುವಂತಾಗಬೇಕು,ಗ್ರಾಮೀಣ ಪ್ರದೇಶದ ಬಡತನದಲ್ಲಿ ಹುಟ್ಟಿ ಸರ್ಕಾರಿ ಶಾಲೆಯಲ್ಲಿ ಕಲಿತು ದೇಶಕ್ಕೆ ಮಾದರಿಯಾದ ಡಾ.ಬಿ.ಆರ್. ಅಂಬೇಡ್ಕರ್, ಅಬ್ದುಲ್ ಕಲಾಮ್, ರಾಧಾಕೃಷ್ಣನ್ ಅವರಂತ ವ್ಯಕ್ತಿಗಳು ನಮಗೆ ಆದರ್ಶಪ್ರಾಯವಾಗಬೇಕು ಎಂದು ಹೇಳಿದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಅವರು ಮಾತನಾಡಿ, ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಸರ್ಕಾರದಿಂದ ಪ್ರತಿಭಾ ಕಾರಂಜಿ, ಕಲೋತ್ಸವಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಮುಖಂಡರಾದ ಗುರುರಾಜ ಆಕಳವಾಡಿ, ರಾಜಕುಮಾರ ಸಿಂದಗೇರಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವೇ.ಮೂ.ಅಯ್ಯಪ್ಪಸ್ವಾಮಿ ಹಿರೇಮಠ ವಹಿಸಿದ್ದರು. ಅಧ್ಯಕ್ಷತೆಯನ್ನು ಮಹಾದೇವಿ ಆಕಳವಾಡಿ ಅವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಣಮಂತ್ರಾಯಗೌಡ ಪಾಟೀಲ, ಜಿಲ್ಲಾ ಪ್ರಾ ಶಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಿ. ಎಸ್.ಬೇವನೂರ, ತಾಲೂಕು ಅಧ್ಯಕ್ಷರಾದ ಎ.ಎಚ್.ವಾಲೀಕಾರ, ಸಿ.ಆರ್.ಸಿ ವಿಜಯಲಕ್ಷ್ಮಿ ನವಲಿ, ಶಿಕ್ಷಕರುಗಳಾದ ನಾಗೇಶ ನಾಗೂರ, ಡಿ.ಎಚ್.ರಾಠೋಡ, ಕಾನಿಪ ತಾಲೂಕು ಅಧ್ಯಕ್ಷರಾದ ಸಂಗಮೇಶ ಉತ್ನಾಳ, ಮಾಜಿ ತಾಪಂ ಸದಸ್ಯ ಶ್ರೀಶೈಲ ಕಬ್ಬಿನ, ಗ್ರಾಮದ ಪ್ರಮುಖರಾದ ಬಸನಗೌಡ ಪಾಟೀಲ,ಬೀರು ಹಳ್ಳಿ, ಶಿವಪ್ಪ ನಾಯ್ಕೋಡಿ, ರಾಜು ರಾಠೋಡ,ಸುಭಾಷ್ ಹೊಸಟ್ಟಿ, ಎಸ್.ಡಿ. ಎಂ. ಸಿ ಉಪಾಧ್ಯಕ್ಷೆ ಲಲಿತಾ ಕೊಂಡಗೂಳಿಕರ ಸೇರಿದಂತೆ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
