
ಉದಯವಾಹಿನಿ ನಾಗಮಂಗಲ: ಕರ್ನಾಟಕ ಮತ್ತು ತಮಿಳುನಾಡು ನಡುವಣ ಕಾವೇರಿ ಜಲವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಕಾವೇರಿ ಪ್ರಾಧಿಕಾರದ ನಿರ್ದೇಶನದಂತೆ ಪ್ರತಿನಿತ್ಯ 5000 ಕ್ಯೂ ಸಿಕ್ಸ್ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕರ್ನಾಟಕದ ಸರ್ಕಾರಕ್ಕೆ ಸೂಚಿಸಿದೆ. ಕಾವೇರಿ ಕೊಳ್ಳದ ರೈತರಿಗೆ ಈ ತೀರ್ಪಿನಿಂದ ಅನ್ಯಾಯವಾಗಿದೆ ರಾಜ್ಯದ ರೈತರ ಹಿತ ಕಾಪಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಸುಪ್ರೀಂ ಕೋರ್ಟ್ ನೀಡಿರುವ ಕಾವೇರಿ ಪ್ರಾಧಿಕಾರದ ತೀರ್ಪನ್ನು ಮರು ಪರಿಶೀಲಿಸುವಂತೆ ಮಂಡ್ಯ ರೈತರಿಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಕ್ಷಣ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ತಡೆಹಿಡಿಯಲು ಒತ್ತಾಯಿಸಿ ರಾಜ್ಯದ ಹಾಗು ರೈತರ ಪರವಾಗಿ ರಾಷ್ಟ್ರಪತಿಯವರಿಗೆ ತಾಲೂಕು ದಂಡಾಧಿಕಾರಿಗಳ ಮೂಲಕ ಮನವಿಯನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್ ಜೆ ರಾಜೇಶ್ ರವರು ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಅನೇಕ ಮುಖಂಡರು ರೈತರು ನಾಗರಿಕರು ಹಾಜರಿದ್ದರು.
