ಉದಯವಾಹಿನಿ ಕುಶಾಲನಗರ :-ಸರ್ಕಾರದ 5 ಗ್ಯಾರಂಟಿ ಯೋಜನೆಯನ್ನು ಫಲಾನುಭವಿಗಳಿಗೆ ಸರಿಯಾದ ಕ್ರಮದಲ್ಲಿ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್, 25 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದ್ದು, ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಹಾಗೂ ಸಾರ್ವಜನಿಕರ ಹಾಗೂ ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಆದಷ್ಟು ಬೇಗ ಸ್ಥಳೀಯ ಮಟ್ಟದಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಂಬ0ಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸಿ ಕೊಡಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಅಧಿಕಾರಿಗಳಿಗೆ ಸಲಹೆ ಮಾಡಿದರು.ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಕುರಿತಂತೆ ಫಲಾನುಭವಿಗಳಿಗೆ ಹಣ ವರ್ಗಾವಣೆ ಕುರಿತು ಸಂಬ0ಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಗೂ ನಾರಿ ಶಕ್ತಿ ಯೋಜನೆ ಕುರಿತಂತೆ ಬಸ್‌ನಲ್ಲಿ ಪ್ರಯಾಣಿಸಿದ ಫಲಾನುಭವಿಗಳ ಮಾಹಿತಿ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಅನ್ನಭಾಗ್ಯ ಯೋಜನೆ ಕುರಿತಂತೆ ಫಲಾನುಭವಿಗಳಿಂದ ಬಂದ0ತಹ ಅಹವಾಲನ್ನು ಇಲಾಖಾ ಮಟ್ಟದಲ್ಲಿ ಪರಿಹರಿಸಿಕೊಳ್ಳಬೇಕು ಎಂದರು. ಇಲಾಖಾ ವತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಆಯಾಯ ಇಲಾಖೆಯ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಅಧಿಕಾರಿಗಳಿಗೆ ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಚೆಸ್ ಆಟಗಾರರು ತಮ್ಮ ಸ್ವಂತ ಚೆಸ್ ಸೆಟ್‌ಗಳನ್ನು ತರಬೇಕು. ಪ್ರವೇಶ ಶುಲ್ಕ ರೂ.3೦೦, ಆಟಗಾರರು ಅಕ್ಟೋಬರ್, ೦8 ರಂದು ಬೆಳಗ್ಗೆ 9.3೦ ರೊಳಗೆ ಹಾಜರಿರಬೇಕು. 1ನೇ ಸುತ್ತು ಬೆಳಗ್ಗೆ 1೦ ಗಂಟೆಗೆ ಪ್ರಾರಂಭವಾಗಲಿದೆ. ನೋಂದಣಿಗೆ ಅಗತ್ಯವಿರುವ ದಾಖಲೆಗಳಾದ ಹೆಸರು, ಜನ್ಮ ದಿನಾಂಕದ ಪ್ರಮಾಣಪತ್ರ, ಆಧಾರ್ ಕಾರ್ಡ್, ಶಾಲೆಯ ಹೆಸರು ಮತ್ತು ಶುಲ್ಕ ಪಾವತಿಯ ಸ್ಕಿನ್‌ಶಾಟ್, ವಿವರಗಳನ್ನು 6361643೦24 ಗೆ ವಾಟ್ಸಾಪ್ ಮಾಡಬೇಕು. ಹೆಚ್ಚಿನ ಮಾಹಿತಿಗೆ 6361643೦24 ನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

error: Content is protected !!