ಉದಯವಾಹಿನಿ,ಬಂಗಾರಪೇಟೆ: ಬಡ ಜನರ ಆರೋಗ್ಯಕ್ಕೆ ಸಂಬ0ಧಪಟ್ಟ0ತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜೈ ಭುವನೇಶ್ವರಿ ಕರುನಾಡ ಸೇನೆ ಹಾಗೂ ವೈದೇಹಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ, ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಹಾಗೂ ಪಟ್ಟಣದ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿ0ದ ಪಾರು ಮಾಡಲು ಸಾಧ್ಯ, ನುರಿತ ವೈದ್ಯರಿಂದ ತಪಾಸಣೆ ನಡೆಯುತ್ತಿದೆ, ಹೃದಯ ರೋಗ, ನರ ರೋಗ, ಕಿಡ್ನಿಯಲ್ಲಿ ಕಲ್ಲು, ಮೂತ್ರಕೋಶ ಹಾಗೂ ಮೂತ್ರಪಿಂಡಕ್ಕೆ ಸಂಬ0ದಿಸಿದ ಸಮಸ್ಯೆಗಳು, ಕ್ಯಾನ್ಸರ್, ಮೂಳೆ ಶಾಸ್ತ, ಸ್ತಿರೋಗ, ಕಿವಿ, ಮೂಗು ಗಂಟಲು ಖಾಯಿಲೆ, ಉಚಿತ ಎಕೋ ಮತ್ತು ಇಸಿಜಿಯನ್ನು ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ, ಡಾ.ಭಾರತಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಗೋವಿಂದರಾಜು, ಚಂದ್ರಕುಮಾರ್, ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ರಮೇಶ್, ಪದಾಧಿಕಾರಿಗಳಾದ ರಾಮರೆಡ್ಡಿ, ಸಂದೀಪ್, ಹರೀಶ್‌ಕುಮಾರ್, ಕುಮರೇಶ್, ಮತ್ತು ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
