
ಉದಯವಾಹಿನಿ,ಮುದಗಲ್ಲ: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮುದಗಲ್ಲ ಪುರಸಭೆಯಲ್ಲಿ ಶನಿವಾರ ಆಯೋಜಿಸಿದ್ದ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಅವರು,ಗಾಳಿ, ಮಳೆ, ಬಿಸಿಲು, ಚಳಿ ಎನ್ನದೆ, ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ನೈಜ ಕಾಯಕ ಯೋಗಿಗಳು, ಸ್ವಚ್ಛತಾ ರೂವಾರಿಗಳು ಕೊರೊನಾ ದಂತ ಸಂದಿಗ್ಧ ಸ್ಥಿತಿಯಲ್ಲಿಯೂ ತಮ್ಮ ಜೀವದ ಹಂಗನ್ನು ತೊರೆದು ಬಿಡು ವಿಲ್ಲದ ನೈರ್ಮಲೀಕರಣ ಕಾರ್ಯ ಮಾಡಿದ್ದು ಶ್ಲಾಘನೀಯ ಎಂದರು..
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಗುಂಡಪ್ಪ ಗಂಗಾವತಿ ಅವರು ಮಾತನಾಡಿ, ಪೌರ ಕಾರ್ಮಿಕರ ಕೆಲಸ ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ. ರಾಜ್ಯದಲ್ಲಿ ಪೌರಕಾರ್ಮಿಕರು ಸವಲತ್ತು ಪಡೆಯುವಲ್ಲಿ ಹಿಂದುಳಿದಿದ್ದಾರೆ. ಆದ್ದರಿಂದ ನಿಮ್ಮ ಮಕ್ಕಳನ್ನು ಇದೇ ವೃತ್ತಿಗೆ ತಾರದೆ ತಮ್ಮಲ್ಲಿರುವ ಕೀಳರಿಮೆ ಬಿಟ್ಟು ಅವರನ್ನುವಿದ್ಯಾವಂತರನ್ನಾಗಿ ಉನ್ನತ ಹುದ್ದೆಯೊಂದಿಗೆ ಸಮಾಜದ
ಮುಖ್ಯವಾಹಿನಿಗೆ ತರುವಂತಾಗಬೇಕು ಎಂದರು.ಕಿರಿಯ ಅಭಿಯಂತರರಾದ ಶರಣಪ್ಪ ಅವರು ಮಾತನಾಡಿ, ಪೌರ ಕಾರ್ಮಿಕರ ಸೇವೆ ನಿಜಕ್ಕೂ ಶ್ಲಾಘನೀಯವಾಗಿದೆ.ನಾವು ಮನೆ ಮುಂಭಾಗ ಸ್ವಚ್ಛಗೊಳಿಸಲು ಹಿಂದೇಟು ಹಾಕುತ್ತೇವೆ.ಆದರೆ ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಪಟ್ಟಣ ವನ್ನು ಸ್ವಚ್ಛಗೊಳಿಸಿ ಜನರ ಆರೋಗ್ಯ ಕಾಪಾಡುತ್ತಾರೆ.ಮುದಗಲ್ಲ ನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ
ನಿಡಬೇಕಿರುವುದರಿಂದ ನಮ್ಮ ಕಾರ್ಮಿಕರ ಶ್ರಮ ಹೇಳತೀರದಾಗಿದೆ.ಅವರೇ ನಮ್ಮ ಆರೋಗ್ಯ ರಕ್ಷಕರು ಎಂದರು. ನಂತರ ಮಾತನಾಡಿದ ಮುದಗಲ್ಲ ಪೋಲಿಸ್ ಠಾಣೆಯ ಪಿ.ಎಸ್ ಐ ವೆಂಕಟೇಶ ಅವರು ಮಾತನಾಡಿದರು.ಪ್ರತಿಯೊಂದು ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ದಿನನಿತ್ಯ ನಡೆಯುವ ಪೌರ ಕಾರ್ಮಿಕರ ಕಾಯಕ ದಿಂದ ನಾವೆಲ್ಲ ಉತ್ತಮ ಆರೋಗ್ಯ ಭರಿತರಾಗಿದ್ದೇವೆ.
ಪೌರ ಕಾರ್ಮಿಕರ ಮತ್ತು ಅವರ ಕಾಯಕದ ಬಗ್ಗೆ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಅಭಿಮಾನ ಹೆಚ್ಚಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ , ಸೇರಿ ಪುರಸಭೆ ಸದಸ್ಯರು ಹಾಗೂ ಪುರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
