
ಉದಯವಾಹಿನಿ ಕುಶಾಲನಗರ:-ಕುಶಾಲ ನಗರ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಪುರಸಭೆಯ ಆಡಳಿತಾಧಿಕಾರಿಯಾದ ಯತೀಶ್ ಉಳ್ಳಾಲ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತೀಶ್ ಉಲ್ಲಾಳರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಇದೇ ಸಂದರ್ಭ ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವುದಲ್ಲದೆ ನಿವೇಶನವನ್ನು ನೀಡುವುದಾಗಿ ಭರವಸೆ ನೀಡಿದ ಅವರು ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಕಾರ್ಯಕ್ರಮದ ವೇದಿಕೆಯಲ್ಲಿ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ಗಣೇಶ್ ಉಪಾಧ್ಯಕ್ಷರಾದ ಶ್ರೀಮತಿ ರಶ್ಮಿ ಪುರಸಭೆಯ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಆರೋಗ್ಯ ನಿರೀಕ್ಷಕರಾದ ಉದಯ್ ಪಂಚಾಯಿತಿ ಸದಸ್ಯರುಗಳಾದ ಜಯವರ್ಧನ್ ಆನಂದ ಕುಮಾರ್ ದಿನೇಶ್ ತಿಮ್ಮಪ್ಪ ರೂಪ ಉಮಾಶಂಕರ್ ಶೈಲ ಕೃಷ್ಣಪ್ಪ ಪುಟ್ಟಲಕ್ಷ್ಮಿ ಜಯಲಕ್ಷ್ಮಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು ಕೊನೆಯಲ್ಲಿ ಕ್ರೀಡಾಕೂಟದಲ್ಲಿ ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು.
