???????

ಉದಯವಾಹಿನಿ ಕುಶಾಲನಗರ:- ಮಡಿಕೇರಿ ದಸರಾ ಸಮಿತಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಸರಾ ಆಚರಣೆಗೆ ಎರಡು ಕೋಟಿ ರೂಗಳನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿತು.ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎ ಎಸ್ ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ದಸರಾ ಜನೋತ್ಸವ ಕುರಿತು ಚರ್ಚಿಸಿತು ಎರಡು ಕೋಟಿ ಅನುದಾನ ನೀಡಿ ಸಹಕರಿಸುವಂತೆ ಮನವಿ ಮಾಡಿಕೊಂಡಿತು.ಈ ಸಂದರ್ಭ ದಸರಾ ಸಮಿತಿಯ ಅಧ್ಯಕ್ಷ ಹಾಗೂ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಅನಿತಾ ಪೂವಯ್ಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಪ್ರಧಾನ ಕಾರ್ಯದರ್ಶಿ ಬಿ ವೈ ರಾಜೇಶ್ ಪ್ರಮುಖರಾದ ಟಿಪಿ ರಮೇಶ್ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.
