
ಉದಯವಾಹಿನಿ,ಚಿಂಚೋಳಿ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ನೇತೃತ್ವದ ಸರ್ಕಾರವು ಜನರ ಸಮಸ್ಯೆ ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದರ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆಯವರು ಸೆ.25ರಂದ್ದು ತಾಲ್ಲೂಕಿಗೆ ಆಗಮಿಸಿ ಜನತಾ ದರ್ಶನ ಕಾರ್ಯಕ್ರಮ ಮಾಡುತ್ತಿರುವುದು ತಾಲ್ಲೂಕಿನ ಜಲ್ಪಂತ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಇದರ ಲಾಭ ಕ್ಷೇತ್ರದ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಶರಣುಪಾಟೀಲ ಮೋತಕಪಳ್ಳಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆ ಹೊರಡಿಸಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ರೀತಿಯ ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುವ ಮೂಲಕ ರಾಜ್ಯದಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತಂದಿದೆ,ಚುನಾವಣೆ ಪೂರ್ವದಲ್ಲಿ ರಾಜ್ಯದ ಜನಕ್ಕೆ ಕೊಟ್ಟಂತಹ ಮಾತನ್ನು ಉಳಿಸಿಕೊಂಡು ಇಡೀ ರಾಷ್ಟ್ರವೇ ನಮ್ಮನ್ನು ನೋಡಿ ಮೆಚ್ಚುವಂತ ಕಾರ್ಯ ಮಾಡುತ್ತಿದೆ.
ರಾಜ್ಯ ಸರ್ಕಾರವು ಸೆ.25ರಂದು ಇಡೀ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿ ಸರಕಾರವೇ ಜನರ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆ ಆಲಿಸಿ ಪರಿಹಾರ ನೀಡುವ ಉಪಯೋಗಿ ಕೆಲಸಕ್ಕೆ ಮಾಡುತ್ತಿದೆ.ವಿಶೇಷವಾಗಿ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆರವರು ಚೊಚ್ಚಲ ಜನತಾ ದರ್ಶನ ಕಾರ್ಯಕ್ರಮ ಚಿಂಚೋಳಿ ವಿಧಾನಸಭಾ ಮತಕ್ಷೇತ್ರದಿಂದ ಆರಂಭಿಸುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ.
ಚಿಂಚೋಳಿ ಕ್ಷೇತ್ರದಿಂದ ಬಿಜೆಪಿ ಶಾಸಕರು ಪ್ರತಿನಿಧಿಸುತ್ತಿದ್ದರು ಅದನ್ನು ಲೆಕ್ಕಿಸದೆ ಕೇವಲ ಅಭಿವೃದ್ಧಿ ಮುಖ್ಯ ಅನ್ನುವ ದೃಷ್ಟಿಕೋನ ಇಟ್ಟುಕೊಂಡು ಪ್ರಥಮವಾಗಿ ಚಿಂಚೋಳಿಯಿಂದಲ್ಲೇ ಚಾಲನೆ ಕೊಡುತ್ತಿರುವುದು ಖರ್ಗೆ ಅವರ ಪಾರದರ್ಶಕ ಹಾಗೂ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಯಡೆಗೆ ಅವರಿಗಿರುವ ಕಳಕಳಿಗೆ ಹಿಡಿದ ಕನ್ನಡಿಯಾಗಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಚಿವರ ಜೋತೆ ಇರಲಿದ್ದು ಜನರು ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಸಮಸ್ಯೆಯ ಪರಿಹಾರ ಕಲ್ಪಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
