ಉದಯವಾಹಿನಿ, ನಾಗಮಂಗಲ:   ಜನಸಾಮಾನ್ಯರ ಸಮಸ್ಯೆಗಳಿಗೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಖಡಕ್ ಎಚ್ಚರಿಕೆಯನ್ನ ಸಚಿವರಾದ ಚೆಲುವರಾಯಸ್ವಾಮಿಯವರು ತಿಳಿಸಿದರು. ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ಕಾಳಿಂಗನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಕಿ ಪಾಳ್ಯದಲ್ಲಿ ನಡೆದ ಜನ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರವು ಸಾರ್ವಜನಿಕರ ಹಾಗೂ ರೈತರ ಪರ ಹಲವಾರು ಯೋಜನೆಗಳನ್ನ ಜಾರಿಗೊಳ್ಳುತ್ತಿದ್ದು ನುಡಿದಂತೆ ನಡೆಯುತ್ತಿರುವ ನಮ್ಮ ಸರ್ಕಾರ ಸಾರ್ವಜನಿಕರ ಹಾಗೂ ರೈತರ ಹಿತ ಕಾಪಡಲು ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಜನಸಾಮಾನ್ಯರ ಸಮಸ್ಯೆಗಳಿಗೆ ಗ್ರಾಮ ಪಂಚಾಯಿತಿ ತಾಲ್ಲೂಕ್ ಆಡಳಿತ ಸಂಬಂಧಪಟ್ಟ ಇಲಾಖೆಗಳಿದ್ದು ತಮ್ಮ ಸಮಸ್ಯೆಗಳನ್ನ ನೇರವಾಗಿ ಬಗೆಹರಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಅಧಿಕಾರಿಗಳು ಮಾಡಬೇಕಾಗಿದ್ದು ತಾವುಗಳು ಯಾವುದೇ ರೀತಿಯಲ್ಲಿ ಹಣ ನೀಡದೆ ಸಮಸ್ಯೆಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ತಮ್ಮ ಜವಾಬ್ದಾರಿಯಾಗಿದ್ದು ಅಧಿಕಾರಿಗಳು ಸ್ಪಂದಿಸದಿದ್ದರೆ ನೇರವಾಗಿ ನನ್ನ ಗಮನಕ್ಕೆ ತರಬೇಕೆಂದು ತಿಳಿಸಿದರು.ಸಮಾರಂಭದಲ್ಲಿ ಉಪ ವಿಭಾಗ ಅಧಿಕಾರಿಗಳು ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿ ವರ್ಗದವರು ಹಾಜರಿದ್ದರು. ಸಭೆಯಲ್ಲಿ ಕೃಷ್ಣೆಗೌಡ.ತಿಮ್ಮರಾಯಿಗೌಡ ಹಾಗೂ ಅನೇಕ ಮುಖಂಡರುಗಳು ಹಾಜರಿದ್ದರು

Leave a Reply

Your email address will not be published. Required fields are marked *

error: Content is protected !!