
ಉದಯವಾಹಿನಿ ಹಿರಿಯೂರು: ಚಿತ್ರದುರ್ಗ ಜಿಲ್ಲೆ, ಹಿರಿಯೂರಿನ ತಾಹಾ ಪ್ಯಾಲೆಸ್ ನಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್ ಅವರು ಅಕ್ಟೋಬರ್ ತಿಂಗಳ ಒಳಗಾಗಿ 6500 ಕ್ಕೂ ಹೆಚ್ಚು ಪೌತಿ ಖಾತೆಗಳನ್ನು ಆಂದೋಲನ ರೀತಿ ಕೈಗೊಂಡು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಸೋಮಶೇಖರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
