ಉದಯವಾಹಿನಿ, ಮಾಲೂರು: ಕುಡಿಯನೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಒಂದು ಕೋಟಿ ಅವ್ಯವಾರ ನಡೆಸಿದ್ದಾರೆ ಎಂದು ಆರೋಪಿಸಿರುವ ಕುಡಿಯನೂರು ಗ್ರಾಮದ ಮುಖಂಡ ದೇವರಾಜು ಆರೋಪ ಸಾಬೀತಪಡಿಸದ ಕಾರಣ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ತಾ.ಪಂ ಇ ಓ ಅವರಿಗೆ ದೂರು ಸಲ್ಲಿಸಲಾಗುವುದು ಎಂದು ಕುಡಿಯನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ನಂಜುಂಡೇಶ್ವರ ಹೇಳಿದರು.
ತಾಲೂಕಿನ ಕುಡಿಯನೂರು ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದರು.
ಕುಡಿಯನೂರು ಗ್ರಾಮದ ಮುಖಂಡ ದೇವರಾಜು ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಕೆಲಸಗಳಿಗೆ ವಿನಾಕಾರಣ ತೊಂದರೆ ನೀಡುತ್ತಿದ್ದು, ಕಾಮಗಾರಿಗಳು ನಡೆಯುವ ಕಡೆ ಹೋಗಿ ಫೋಟೋಗಳನ್ನು ತೆಗೆದು ಕಳಪೆ ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿದೆ ನಡೆದಿದೆ ಎಂದೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಮೇಲೆ ಆರಂಭಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ಕೋಟಿಗಟ್ಟಲೆ ಅವ ವ್ಯವಹಾರ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿಗಳು ನಡೆದಿದೆ. ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರುಗಳ ಮೇಲೆ ಆರೋಪ ಮಾಡುತ್ತಿದ್ದಾರೆ.
