ಉದಯವಾಹಿನಿ ಕುಶಾಲನಗರ :-ಜನತಾ ದರ್ಶನದ ಮೂಲಕ ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ವಿನೂತನ ಪ್ರಯತ್ನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಚಾಲನೆ ನೀಡಿದರು.ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಗ್ರಾ.ಪಂ. ಅಧ್ಯಕ್ಷರಾದ ವನಜಾಕ್ಷಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಇತರರು ಪಾಲ್ಗೊಂಡಿದ್ದರು.ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಇಲಾಖೆಗಳ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಮಳಿಗೆಯನ್ನು ಸಚಿವರು ಮತ್ತು ಶಾಸಕರು ವೀಕ್ಷಿಸಿದರು. ಜನತಾ ದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿ ಸುಮಾರು ೧೭೦ ಕ್ಕೂ ಹೆಚ್ಚು ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು, ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವರು ಪರಿಹರಿಸಿದರು.ಸರ್ಕಾರದ ೫ ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಯಾವುದೇ ಮಧ್ಯವರ್ತಿಗಳಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಬಡವರಿಗೆ ತಲುಪಿಸಲಾಗುತ್ತಿದೆ. ಈ ಯೋಜನೆಗಳು ಸರ್ಕಾರದ ಮಹತ್ವಾಂಕಾಕ್ಷೆಯಾಗಿದೆ ಎಂದರು.ಸಾರ್ವಜನಿಕರೊಬ್ಬರು ಮಾತನಾಡಿ ನಾಪೋಕ್ಲು ಭಾಗದಲ್ಲಿ ವಿದ್ಯುತ್ ಪರಿವರ್ತಕ ನಿರ್ಮಾಣ ಮಾಡಬೇಕು. ಕ್ರೀಡಾಪಟುಗಳಿಗೆ ಹಾಕಿ ಮೈದಾನ ನಿರ್ಮಿಸಬೇಕು. ಬಸ್ ನಿಲ್ದಾಣಕ್ಕೆ ಜಾಗ ಒದಗಿಸಲಾಗಿದ್ದು, ಗ್ರಾ.ಪಂ.ಗೆ ಜಾಗ ಹಸ್ತಾಂತರಿಸಬೇಕು. ಜೊತೆಗೆ ನಾಪೋಕ್ಲು ಗ್ರಾ.ಪಂ.ಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದರು.ಕಾರ್ಮಿಕ ಇಲಾಖೆ ವತಿಯಿಂದ ಸುಮಾರು ೨೮ ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ಕಂದಾಯ ಇಲಾಖೆಯಿಂದ ಹಕ್ಕುಪತ್ರ ವಿತರಿಸಲಾಯಿತು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರ ನುಡಿದಂತೆ ನಡೆಯುತ್ತಿದೆ. ೧೦೦ ದಿನದಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಮಾತನಾಡಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರರು, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!