ಉದಯವಾಹಿನಿ, ನವದೆಹಲಿ: ಕೇಂದ್ರ ಸರ್ಕಾರವು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದಲ್ಲಿ ಎಎಫ್‌ಎಸ್‌ಪಿಎ (ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ)ಯನ್ನು ಅಕ್ಟೋಬರ್ ೧, ೨೦೨೩ ರಿಂದ ಆರು ತಿಂಗಳವರೆಗೆ ವಿಸ್ತರಿಸಿದೆ.
ಸರ್ಕಾರ ಎರಡು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದ್ದು, ಎರಡೂ ರಾಜ್ಯಗಳ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ಈ ಅತಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳ ಲಾಗಿದೆ. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ ಎಂಬುದು ಸೇನೆ ಮತ್ತು ಇತರ ಕೇಂದ್ರೀಯ ಅರೆಸೇನಾ ಪಡೆಗಳಿಗೆ ಯಾವುದೇ ಪೂರ್ವ ಮಾಹಿತಿ ಅಥವಾ ಬಂಧನ ವಾರಂಟ್ ಇಲ್ಲದೆ ದಾಳಿಗಳು ಮತ್ತು ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಯಾರನ್ನಾದರೂ ಎಲ್ಲಿ ಬೇಕಾದರೂ ಬಂಧಿಸಲು ಅನುಮತಿಸುವ ಕಾನೂನಾಗಿದೆ.
ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಅಕ್ಟೋಬರ್ ೧, ೨೦೨೩ ರಿಂದ ಮುಂದಿನ ವರ್ಷ ಮಾರ್ಚ್‌ವರೆಗೆ ವಿಸ್ತರಿಸಿದೆ. ಈ ಜಿಲ್ಲೆಗಳ ಭದ್ರತೆಯನ್ನು ಪರಿಶೀಲಿಸಿದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ. ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ, ೧೯೫೮ ರ ಅಡಿಯಲ್ಲಿ ತೊಂದರೆಗೊಳಗಾದ ಪ್ರದೇಶ ಸ್ಥಿತಿಯನ್ನು ಆರು ತಿಂಗಳವರೆಗೆ ವಿಸ್ತರಿಸಿದೆ.

Leave a Reply

Your email address will not be published. Required fields are marked *

error: Content is protected !!