ಉದಯವಾಹಿನಿ ಚಿತ್ರದುರ್ಗ: ನಗರದ ಐತಿಹಾಸಿಕ ಕೋಟೆ ಆವರಣದಬನಶಂಕರಿ ದೇವಸ್ಥಾನದ ಬಳಿಜಿಲ್ಲಾ ಆರೋಗ್ಯ ಇಲಾಖೆ ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಚಿತ್ರದುರ್ಗ ಇವರ ಸಹಯೋಗದೊಂದಿಗೆಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಾಕ್ಟರ್ ಆರ್ ರಂಗನಾಥ್ ಮಾತನಾಡಿ ಆರೋಗ್ಯ ಸುರಕ್ಷತಾ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ ೧೭ ರಿಂದ ಅಕ್ಟೋಬರ್ ೦೨ ರ ವರೆಗೆ ಆರೋಗ್ಯ ಇಲಾಖೆಯಿಂದ ಆಯುಷ್ಮಾನ್ ಭವ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚಂದ್ರಶೇಖರ್ ಕಂಬಳಿಮಠ ಜಿಲ್ಲಾ ಕುಷ್ಟರೋಗ ನಿಯಂತ್ರಣಧಿಕಾರಿ ಡಾ. ನಾಗರಾಜ್   ತಾಲೂಕ್ ಆರೋಗ್ಯ ಅಧಿಕಾರಿ ಡಾಕ್ಟರ್ ಬಿ ವಿ ಗಿರೀಶ್ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್ಎಸ್ ಮಂಜುನಾಥ.  ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮುಗಪ್ಪ ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಶ್ರೀಧರ್   ಬುದ್ಧನಗರ ನಗರ ಆರೋಗ್ಯ ಕೇಂದ್ರದ ಎಲ್ಲಾಆರೋಗ್ಯ ಸಿಬ್ಬಂದಿಗಳು ಯೋಗ ಶಿಕ್ಷಕರಾದ ವಸಂತಲಕ್ಷ್ಮಿ ಮಂಜುಳಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!