ಉದಯವಾಹಿನಿ ಯಾದಗಿರಿ: ರೈತರು ತಮ್ಮ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸುವ ಮೂಲಕ ಯಾವುದೇ ರೋಗಗಳು ಬರದಂತೆ ಮುನ್ನಚ್ಚೆರಿಕೆ ವಹಿಸಬೇಕು ಎಂದು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಹೇಳಿದರು.ನಗರದ ಜಿಲ್ಲಾ ಪಾಲಿ ಕ್ಲಿನಿಕ್ ಆವರಣದಲ್ಲಿ ರಾಷ್ಟಿಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿಯಲ್ಲಿ ಪ್ರಾರಂಭವಾಗುವ ೪ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕಾಲು ಮತ್ತು ಬಾಯಿ ರೋಗ ಬಂದಾಗ ಚಿಕಿತ್ಸೆಗೆ ಬದಲಾಗಿ ಲಸಿಕೆಯೇ ಮುಖ್ಯವಾಗಿದೆ ಎಂಬುದನ್ನು ರೈತರು ಹರಿಯಬೇಕು. ಪಶು ವೈದ್ಯರು ಮನೆ-ಮನೆಗೆ ಲಸಿಕಾಕರಣಕ್ಕೆ ಬಂದಾಗ ರೈತರು ತಮ್ಮ ಜಾನುವಾರುಗಳಿಗೆ ಮರೆಯದೇ ಲಸಿಕೆ ಕೊಡಿಸಬೇಕು ಎಂದು ಕಿವಿಮಾತು ಹೇಳಿದರು.ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ. ರಾಜು ದೇಶಮುಖ ಮಾತನಾಡಿ, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಕ್ಕೆ ತುತ್ತಾಗದಂತೆ ಮುಂಜಾಗೃತ ಕ್ರಮವಾಗಿ ಇಂದಿನಿ೦ದ ಅಕ್ಟೋಬರ್ 25ರ ವರೆಗೆ 4ನೇ ಸುತ್ತಿನ ಕಾಲುಬಾಯಿ ಬೇನೆ ಅಭಿಯಾನ ನಡೆದಿದ್ದು, ಎಲ್ಲಾ ರೈತರು ತಮ್ಮ ಜಾನುವಾರುಗಳಿಗೆ ಲಸಿಕಾ ಹಾಕಿಸಬೇಕು ಎಂದು ಅವರು ಮನವಿ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ. ರಷೀದ್ ಇಕ್ಬಾಲ್, ಯಾದಗಿರಿ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಶರಣಭೂಪಾಲರೆಡ್ಡಿ ಸೇರಿದಂತೆ ತಾಲ್ಲೂಕಿನ ಪಶು ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!