
ಉದಯವಾಹಿನಿ, ಹಾಪುರ: ಉತ್ತರ ಪ್ರದೇಶದಲ್ಲಿ ತಾಯಿಯೊಬ್ಬಳು ತನ್ನ ಮಗನ ಜೊತೆ ಸೇರಿ ವಿವಾಹವಾಗದೆ ಗರ್ಭಿಣಿಯಾಗಿದ್ದ ಮಗಳನ್ನು ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ.
ತಮ್ಮ ಅವಿವಾಹಿತ ಮಗಳು ಗರ್ಭಿಣಿಯಾಗಿದ್ದಾಳೆ ಎಂದು ತಿಳಿದ ನಂತರ ಮಹಿಳೆಯ ಕುಟುಂಬ ಸದಸ್ಯರು ಆಕ್ರೋಶಗೊಂಡು ಈ ಕೃತ್ಯ ನಡೆಸಿದ್ದಾರೆ ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ. ಮಗುವಿನ ತಂದೆಯ ಬಗ್ಗೆ ಕೇಳಿದಾಗ ಯಾವುದೇ ವಿವರಗಳನ್ನು ಬಹಿರಂಗಪಡಿಸದ ಕಾರಣ.
೨೧ರ ಹರೆಯದ ಮಗಳನ್ನು ತಾಯಿ ಹಾಗೂ ಸಹೋದರ ಆಕೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ.
ಅರಣ್ಯದಲ್ಲಿದ್ದ ಕೆಲವು ರೈತರು ಮಹಿಳೆಯನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
