
ಉದಯವಾಹಿನಿ, ನವದೆಹಲಿ: ನವೆಂಬರ್-ಡಿಸೆಂಬರ್‍ನಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು ಐದು ರಾಜ್ಯಗಳಲ್ಲಿ ಚುನಾವಣೆ ಮೇಲಿಟ್ಟಿರುವ ಬಿಜೆಪಿ ಗೆಲುವಿಗೆ ಕಣ್ಣಿಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಈಗಾಗಲೇ ರಾಜಕೀಯ ರ್ಯಾಲಿಗಳನ್ನು ನಡೆಸುತ್ತಿದ್ದು ಚುನಾವಣೆ ಗೆಲ್ಲಲು ರಣತಂತ್ರ ರೂಪಸಿದ್ದಾರೆ. ಮಧ್ಯಪ್ರದೇಶದಲ್ಲಿ ಬಿಜೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವಲ್ಲಿ ಇತರರಿಗಿಂತ ಮುಂದಿದೆ. ಈ ಪಟ್ಟಿಯಲ್ಲಿ ಹಾಲಿ ಸಂಸದರು, ಸಚಿವರು ಮತ್ತು ಕೇಂದ್ರ ಪಕ್ಷದ ಪದಾಧಿಕಾರಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಯ ಆತಂರಿಕ ಕಟ್ಟಾಚ ಸಮಸ್ಯೆಯಿಂದ ಬಳಸಲುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಬಿಜೆಪಿ ಹಲವು ಕೇಂದ್ರ ಸಚಿವರು, ಸಂಸದರಿಗೆ ಅವಕಾಶ ಮಾಡಿಕೊಟ್ಟಿದೆ ಅದರಲ್ಲಿ ಮೊರೆನಾ ಸಂಸದ, ಕೇಂದ್ರ ಆಹಾರ ಸಂಸ್ಕರಣಾ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಮೊರೆನಾ ಲೋಕಸಭೆಯ ದಿಮಾನಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ.
