ಉದಯವಾಹಿನಿ, ಕೋಲಾರ: ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮದ ಶ್ರೀ ವೆಂಕಟೇಶ್ವರ ಯುವಕ ರೈತ ಸಂಘದ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶೋತ್ಸವದ ವಿಸರ್ಜನೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಅದ್ದೂರಿಯಾಗಿ ನಡೆದವು.
ಕಳೆದ ೩೦ ವರ್ಷಗಳಿಂದ ಗಣೇಶ ಮಹೋತ್ಸವು ಹಮ್ಮಿಕೊಳ್ಳಲಾಗಿದ್ದು, ಈ ವರ್ಷವು ಸಾಂಸ್ಕೃತಿಕ ಕಾರ್ಯಕ್ರಮಗಳಾದ ತಮಟೆ ವಾದ್ಯ, ಮಡಿಕೆ ಒಡೆಯುವ ಕಾರ್ಯಕ್ರಮ, ಮ್ಯೂಸಿಕಲ್ ಚೇರ್, ರಸಮಂಜರಿ ಇನ್ನೂ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಗಣೇಶೋತ್ಸವದ ಪ್ರಯುಕ್ತ ಪ್ರತಿನಿತ್ಯ ದೇವರಿಗೆ ವಿಶೇಷ ಅಲಂಕಾರ ಪೂಜೆ ನಡೆದವು. ಭಕ್ತಾದಿಗಳಿಂದ ಹಾಗೂ ಸಂಘದ ವತಿಯಿಂದ ಪ್ರಸಾದ ವಿನಿಯೋಗ ನಡೆಯಿತು ನಂತರ ಚಿಕ್ಕತಿರುಪತಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಾದ ಗಣ್ಯರಾದ ಹರೀಶ್ ರೆಡ್ಡಿ (ಸರ್ಕಲ್ ಇನ್ಸ್‌ಪೆಕ್ಟರ್). ಡಾ ರಾಮಕೃಷ್ಣಪ್ಪ ನಿವೃತ್ತ ದೈಹಿಕ ಶಿಕ್ಷಕರಾದ ಚನ್ನಕಷ್ಣರೆಡ್ಡಿ ಸೇರಿದಂತೆ ಮತ್ತಿತರನ್ನು ರಸಮಂಜರಿ ಕಾರ್ಯಕ್ರಮದಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

error: Content is protected !!