ಉದಯವಾಹಿನಿ ಚಿತ್ರದುರ್ಗ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಸ್ವಚ್ಛತಾ ಹೀ ಸೇವಾ ಅಭಿಯಾನ ಹಮ್ಮಿಕೊಳ್ಳಲಾಯಿತು.ಜಿಲ್ಲಾ ನ್ಯಾಯಾಂಗ ಇಲಾಖೆ, ನಗರಸಭೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯ ಆವರಣದ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅಭಿಯಾನ ಕಾರ್ಯರೂಪಕ್ಕೆ ತರಲಾಯಿತು. ಇದಕ್ಕೂ ಮೊದಲು ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಸ್ವಚ್ಛತೆಯ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
 ನ್ಯಾಯಾಲಯ ಮತ್ತು ಜಿಲ್ಲಾ ಖಜಾನೆ ಮುಂಭಾಗದ ಅಂಗಡಿ ಮುಗ್ಗಟ್ಟುಗಳ ಮಾಲೀಕರಿಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ತಿಳುವಳಿಕೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ, ಅಪರ ಜಿಲ್ಲಾ ನ್ಯಾಯಾಧೀಶರಾದ ಎಸ್.ಎನ್.ಕಲ್ಕಣಿ, ಬಿ.ಕೆ.ಕೋಮಲಾ, ಸಿವಿಲ್ ನ್ಯಾಯಾಧೀಶರಾದ ಕೆಂಪರಾಜು, ಚೈತ್ರಾ, ಉಜ್ವಲಾ ವೀರಣ್ಣ, ಗೀತಾ ಕುಂಬಾರ, ನೇಮಿಚಂದ್ರ, ಅನಿತಾ ಕುಮಾರಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ನಗರಸಭೆ ಆಯುಕ್ತೆ ರೇಣುಕಾ, ಸಿಬ್ಬಂದಿ ಜಾಫರ್, ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಕಾರ್ಯದರ್ಶಿ ಗಂಗಾಧರ್, ವಕೀಲರಾದ ಉಮೇಶ್ ಹಾಗೂ ನ್ಯಾಯಾಂಗ ಸಿಬ್ಬಂದಿ ವರ್ಗದವರು ಮತ್ತು ನಗರಸಭೆ ಸಿಬ್ಬಂದಿ ವರ್ಗದವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!