
ಉದಯವಾಹಿನಿ ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಹೋ.ಚಿ.ಬೋರಯ್ಯ ಬಡಾವಣೆಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶನಿವಾರ ನಿರಾಶ್ರಿತರಿಗೆ ಕಾನೂನು ಅರಿವು ನೆರವು ಹಾಗೂ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ನಿರಾಶ್ರಿತರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟಿಸಿದರು. ನಂತರ ನಿರಾಶ್ರಿತರನ್ನು ಕುರಿತು ಮಾತನಾಡಿದ ಅವರು,ಮನ ಪರಿವರ್ತನೆ ಮೂಲಕ ತಮ್ಮ-ತಮ್ಮ ಮನೆಗಳನ್ನು ಸೇರಲು ನಾವು ಯಾವುದೇ ನೆರವು ಮಾಡಲು ಸಿದ್ಧರಿದ್ದೇವೆ ಹಾಗೂ ನಿರಾಶ್ರಿತರು ಮನೆ ಪರಿವರ್ತನೆಯಾಗಿ ಮನೆ ಸೇರಲಿ ಎಂದು ಬಯಸುತ್ತೇವೆ ಎಂದು ಆಶಯ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮಾತನಾಡಿ, ನಿರಾಶ್ರಿತರಿಗೆ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿದ್ದವರನ್ನು ಚಿಕಿತ್ಸೆ ನೀಡಿ ಇವರುಗಳನ್ನು ಮುಖ್ಯ ವಾಹಿನಿಗೆ ತರುವುದೇ ನಮ್ಮ ಉದ್ದೇಶ ಎಂದರು ತಿಳಿಸಿದರು. ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಮಾತನಾಡಿ, ಮಾನಸಿಕ ಅಸ್ವಸ್ಥರನ್ನು ಸುಧಾರಿಸುತ್ತಿರುವ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸಿ, ನಿಮ್ಮ ತಾಳ್ಮೆ ಮತ್ತು ಸಹನೆಯಿಂದ ಇವರುಗಳು ಬೇಗ ಗುಣಮುಖರನ್ನಾಗಿ ಮಾಡಿ ಮುಖ್ಯವಾಹಿನಿಗೆ ತರುವುದು ನಮ್ಮ ಉದ್ದೇಶವಾಗಿರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ವ್ಯವಸ್ಥಾಪಕ ಮಹದೇವಯ್ಯ, ಅಧೀಕ್ಷಕ ಬಿ.ವಿಜಯ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
