ಉದಯವಾಹಿನಿ, ಒಂದೇ ವೇದಿಕೆಯಲ್ಲಿ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್ ಮತ್ತು ಅಮೃತಧಾರೆ ಸೀರಿಯಲ್​ ಖ್ಯಾತಿಯ ಛಾಯಾ ಸಿಂಗ್​ ಕಾಣಿಸಿಕೊಂಡಿದ್ದಾರೆ. ಏನಿದು ಹೊಸ ವಿಷ್ಯ?
ಭೂಮಿಕಾ ಎಂದಾಕ್ಷಣ ಧಾರಾವಾಹಿ ಪ್ರಿಯರ ಕಣ್ಣಮುಂದೆ ಬರುವುದು ಅಮೃತಧಾರೆ ಸೀರಿಯಲ್​ ನಾಯಕಿ. ವಯಸ್ಸಾದರೂ ಮದುವೆಯಾಗದೇ ಉಳಿದ ಮಧ್ಯಮ ಕುಟುಂಬದ ಹೆಣ್ಣುಮಗಳೊಬ್ಬಳು ಒತ್ತಾಯಪೂರ್ವಕವಾಗಿ ವಯಸ್ಸಾಗಿರುವ ಕೋಟ್ಯಧಿಪತಿ ಬಿಜಿನೆಸ್​ಮೆನ್​ ಜೊತೆ ಮದುವೆಯಾಗಿ ಸಂಸಾರದಲ್ಲಿ ಹೊಂದಿಕೊಳ್ಳಲು ಪರದಾಡುತ್ತಿರುವ ಪಾತ್ರ ಈ ಭೂಮಿಕಾಳದ್ದು. ಭೂಮಿಕಾ ಪಾತ್ರಕ್ಕೆ ಜೀವ ತುಂಬಿರೋ ನಟಿಯ ಅಸಲಿ ಹೆಸರು ಛಾಯಾ ಸಿಂಗ್​. ಸಾಮಾಜಿಕ ಜಾಲತಾಣದಲ್ಲಿಯೂ ಆ್ಯಕ್ಟೀವ್​ ಆಗಿರೋ ಛಾಯಾ ಸಿಂಗ್​ ಆಗಾಗ್ಗೆ ಕೆಲವೊಂದು ರೀಲ್ಸ್​ ಮಾಡುತ್ತಿರುತ್ತಾರೆ, ಕೆಲವೊಂದು ಮಾಹಿತಿ ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ಅವರ ಜೊತೆಗೆ ಹೇಳಿರುವ ಡೈಲಾಗ್​ ಒಂದು ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ವೈರಲ್​ ಆಗುತ್ತಿದೆ. ಇದನ್ನು ನೋಡಿ ಛಾಯಾ ಸಿಂಗ್​ ಬೆಳ್ಳಿ ಪರದೆಯ ಮೇಲೆ ಮತ್ತೆ ಎಂಟ್ರಿ ಕೊಡಲಿದ್ದಾರಾ ಎನ್ನುವ ಪ್ರಶ್ನೆ ಏಳುತ್ತಿದೆ.

Leave a Reply

Your email address will not be published. Required fields are marked *

error: Content is protected !!