
ಉದಯವಾಹಿನಿ,ದೇವರಹಿಪ್ಪರಗಿ; ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರು ಜಯಂತಿ ಪ್ರಯುಕ್ತ ಗ್ರಾಮದ ಡಾ.ಎಪಿಜಿ ಅಬ್ದುಲ್ ಕಲಾಂ ಹಾಗೂ ಮಹಾನಾಯಕ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಗಮ ಸಂಸ್ಥೆಯ ಸಂಯೋಜಕರಾದ ವಿಜಯ ಬಂಟನೂರ ಅವರು ಇಬ್ಬರು ಮಹನೀಯರಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಬಿ.ಎಸ್.ಕೋಟಿಖಾನಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಚೇತನಕುಮಾರ ಹೊಟಗಾರ, ಕಂಟೆಪ್ಪ ಮೂಲಿಮನಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
