?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಉದಯವಾಹಿನಿ ಶಿಡ್ಲಘಟ್ಟ: ಮಹಾತ್ಮಾ ಗಾಂಧೀಜಿ ಅವರು ಸತ್ಯಾಗ್ರಹ ಹಾಗೂ ಅಹಿಂಸೆಯ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾನ್ ವ್ಯಕ್ತಿ. ಗಾಂಧೀಜಿ ಅವರ ಜೀವನವೇ ಜಗತ್ತಿಗೆ ಒಂದು ಸಂದೇಶವಾಗಿದೆ ಎಂದು ಶಾಸಕ ಬಿ ಎನ್ ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಗಾಂಧೀಜಿ ಅವರ ತತ್ವಾದರ್ಶಗಳನ್ನು ನಿತ್ಯಜೀವನದಲ್ಲಿ ಮೈಗೂಡಿಸಿಕೊಂಡು ಪ್ರಾಮಾಣಿಕತೆ ಮತ್ತು ವೃತ್ತಿಪರತೆಯಿಂದ ಕಾರ್ಯನಿರ್ವಹಿಸಬೇಕು. ದಾರ್ಶನಿಕರು, ಮಹನೀಯರ ಆಶಯದಂತೆ ಪ್ರತಿಯೊಬ್ಬರು ಅಹಿಂಸಾ ತತ್ವ ಪಾಲಿಸುವುದರ ಜೊತೆಗೆ ಸತ್ಯ, ಧರ್ಮದ ಹಾದಿಯಲ್ಲಿ ನಡೆಯಬೇಕು ಎಂದರು. ನಮ್ಮ ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಜೈ ಜವಾನ್ ಜೈ ಕಿಸಾನ್ ಅಂದರೆ ಸೈನಿಕನಿಗೂ ಜಯವಾಗಲಿ ರೈತನಿಗೂ ಜಯವಾಗಲಿ ಎಂಬ ಘೋಷಣೆಯನ್ನು ನೀಡಿದ,ಪ್ರಾಮಾಣಿಕವಾಗಿ ದೇಶವನ್ನು ಮುನ್ನೆಡೆಸಿದ ಕೀರ್ತಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರಿಗೆ ಸಲ್ಲುತ್ತದೆ. ಮಹನೀಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆದು ಉತ್ತಮ ಸಮಾಜ ನಿರ್ಮಾಣ ಮಾಡೋಣ ಎಂದು ಹೇಳಿದರು. ತಹಶೀಲ್ದಾರ್ ಬಿ.ಎನ್ ಸ್ವಾಮಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಸರಳತೆ, ನೇರ ನಡೆ-ನುಡಿಗಳಿಂದ ಅತೀ ಎತ್ತರಕ್ಕೆ ಬೆಳೆದು, ಸತ್ಯ, ಶಾಂತಿ, ಅಹಿಂಸೆ ಎಂಬ ಮಹಾ ಅಸ್ತ್ರಗಳೊಡನೆ ಬ್ರಿಟೀಷರನ್ನು ಮಣಿಸಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಮ್ಮ ಹೆಮ್ಮೆಯ ವಿಶ್ವನಾಯಕರು. ಅವರ ಜೀವನಗಾಥೆ ನಮ್ಮೆಲ್ಲರಿಗೂ ಸ್ಫೂರ್ತಿಯಾಗಬೇಕಿದೆ ಎಂದರು.
ಗಾಂಧೀಜಿ ಅವರ ಜೀವನ ಆದರ್ಶಗಳನ್ನು ಜನರಿಗೆ ಪರಿಚಯಿಸಲು ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು, ವಿಜೇತರಿಗೆ ಪಾರಿತೋಷಕ ಮತ್ತು ಪ್ರಮಾಣ ಪತ್ರ ನೀಡಿ ವಿತರಿಸಲಾಯಿತು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಗೈರು ಹಾಜರಾದ ಎಲ್ಲಾ ಅಧಿಕಾರಿಗಳಿಗೂ ಶಾಸಕರು ತರಾಟೆ ತೆಗೆದುಕೊಂಡರು. ಇನ್ನು ಮುಂದೆ ಎಲ್ಲಾ ರಾಷ್ಟ್ರೀಯ ಹಬ್ಬಗಳಿಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು ಎಂದು ತಹಶೀಲ್ದಾರ್ ಬಿಎನ್ ಸ್ವಾಮಿ ಮತ್ತು ಕಾರ್ಯ ನಿರ್ವಹಣಾಧಿಕಾರಿ ಮುನಿರಾಜು ರವರಿಗೆ ಎಚ್ಚರಿಕೆ ನೀಡಿದರು.
ಬಿ.ಎನ್ ರವಿಕುಮಾರ್, ಶಾಸಕರು ಶಿಡ್ಲಘಟ್ಟ.
ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ಜಿ ಮುನಿರಾಜು, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ,ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮಂಜುನಾಥ್,ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ ನರೇಂದ್ರಕುಮಾರ್, ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ,ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ದೇವರಾಜ್, ಶಿಕ್ಷ ಪಟೇಲ್ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
