ಉದಯವಾಹಿನಿ ಕುಶಾಲನಗರ :- ಗಾಂಧೀಜಿ ಅವರು ಸತ್ಯ ದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟರು. ಗಾಂಧೀಜಿಯವರ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.ಬಾಪೂಜಿ ಎಂದೇ ಪ್ರಖ್ಯಾತರಾದ ಮಹಾತ್ಮ ಗಾಂಧೀಜಿ ಅವರು ಸತ್ಯಾಗ್ರಹ ಹಾಗೂ ಅಹಿಂಸೆ ಎಂಬ ಅಸ್ತ ಗಳಿಂದ ಸ್ವಾತಂತ್ರ‍್ಯವನ್ನು ತಂದುಕೊಟ್ಟರು ಎಂದರು. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿ ಅವರು ಪ್ರಧಾನಿಯಾಗಿ ರಾಷ್ಟçಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ‘ಜೈಜವಾನ್ ಜೈಕಿಸಾನ್’ ಎಂಬ ಸಂದೇಶ ಸಾರುವ ಮೂಲಕ ರಾಷ್ಟçದಲ್ಲಿ ಸೇನೆ ಹಾಗೂ ಕೃಷಿಯ ಮಹತ್ವದ ಬಗ್ಗೆ ವರ್ಣಿಸಿದ್ದಾರೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ.ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ವರ್ಣಿತ್ ನೇಗಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿದರು.ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಮಾತನಾಡಿ ಮಹಾತ್ಮ ಗಾಂಧೀಜಿಯವರು ಪರಿಸರದ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದು ತಿಳಿಸಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶೀಲ್ದಾರ್ ಪ್ರವೀಣ್ ಕುಮಾರ್, ನಗರಸಭೆ ಪೌರಾಯುಕ್ತರಾದ ವಿಜಯ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ವೆಂಕಟೇಶ್ ಪ್ರಸನ್ನ, ಉಪನ್ಯಾಸಕರಾದ ಉ.ರಾ.ನಾಗೇಶ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಇತರರು ಇದ್ದರು.

 

Leave a Reply

Your email address will not be published. Required fields are marked *

error: Content is protected !!