ಉದಯವಾಹಿನಿ, ನವದೆಹಲಿ: ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್ ಕ್ಲಿಕ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪತ್ರಕರ್ತರ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ಚೀನಾದಿಂದ ನ್ಯೂಸ್ ಪೋರ್ಟಲ್ ದೇಣಿಗೆ ಪಡೆದುಕೊಂಡಿದೆ ಎಂಬ ಆರೋಪದ ನಡುವೆ ಈ ದಾಳಿ ನಡೆದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಗಳಲ್ಲಿ ಒಬ್ಬರಾದ ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಕಚೇರಿಯಲ್ಲಿ ಅಧಿಕೃತ ನಿವಾಸದ ಆವರಣದಲ್ಲಿ ವಾಸಿಸುತ್ತಿದ್ದಾರೆಂದು ವರದಿಯಾದ ನಂತರ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ನ್ಯೂಸ್ ಕ್ಲಿಕ್ ವೆಬ್‍ಸೈಟ್‍ಗೆ ಸಂಬಂಧಿಸಿದ ಘಟಕಗಳ ಮೇಲೆ ನಡೆಯುತ್ತಿರುವ ಕ್ರಮದ ಭಾಗವಾಗಿ ಮಂಗಳವಾರ ಬೆಳಗ್ಗೆ ಸಿಪಿಐ-ಎಂ ನಾಯಕ ಸೀತಾರಾಮ್ ಯೆಚೂರಿ ಅವರ ಅಧಿಕೃತ ನಿವಾಸದ ಮೇಲೆ ದೆಹಲಿ ಪೊಲೀಸ್ ವಿಶೇಷ ದಳ ದಾಳಿ ನಡೆಸಿದೆ.
ನವದೆಹಲಿ ನೋಯ್ಡಾ ಹಾಗೂ ಗಾಜಿಯಾಬಾದ್‍ನ 30ಕ್ಕೂ ಹೆಚ್ಚು ಕಡೆಗಳಲ್ಲಿ ದೆಹಲಿ ಪೊಲೀಸರು ಬೃಹತ್ ಪ್ರಮಾಣದ ದಾಳಿ ನಡೆಸಿದ್ದಾರೆ.
