ಉದಯವಾಹಿನಿ ದೇವದುರ್ಗ: 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀಮತಿ ಶ್ರೀದೇವಿ ರಾಜಶೇಖರ ನಾಯಕ ಅವರ ಒಳ ಒಪ್ಪಂದದ ಆರೋಪದ ನಡುವೆ ಕೊನೆ ಗಳಿಗೆಯಲ್ಲಿ ಪಕ್ಷದ ಮುಖಂಡರ ಕಾರ್ಯಕರ್ತರ ಸಂಪರ್ಕಕ್ಕೆ ಬರದೆ ಬೇರೊಂದು ರಾಜಕೀಯ ಪಕ್ಷದ ಗೆಲುವು ಕಾಣಲು ಪರೋಕ್ಷವಾಗಿ ಮೌನ ವಹಿಸಿದ ಕಾಂಗ್ರೆಸ್ ಅಭ್ಯರ್ಥಿಯಾದ ಪತಿಯಾದ ಎ ರಾಜಶೇಖರ ನಾಯಕ ಅವರಿಂದ ತಮ್ಮಿಂದ ಪಕ್ಷಕ್ಕೆ ಹೀನಾಯ ಸೋಲಾಗಿದೆ ಹೊರತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ವಿವಿಧ ಜನಪ್ರತಿನಿಧಿಗಳ ಕ್ಷೇತ್ರದ ಮತದಾರ ಪ್ರಭುಗಳಿಂದ ಅಲ್ಲಾ ಪಕ್ಷದ ಮುಖಂಡರ ಬಗ್ಗೆ ಸೋಮವಾರದಂದು ನಡೆದ ಚಿಂತನ ಮಂಥನ ಸಭೆಯಲ್ಲಿ ವೈಯುಕ್ತಿಕವಾಗಿ ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷದ ಪರಾಜಯ ಅಭ್ಯರ್ಥಿ ಶ್ರೀದೇವಿ ಅವರು ತಮ್ಮ ಸ್ವಂತ ಗ್ರಾಮ ಸ್ವತಃ ಮತದಾನ ಕೇಂದ್ರದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಬಂದಿದ್ದಾವೆ ಎಂದು ಶ್ರೀದೇವಿ ರಾಜಶೇಖರ ನಾಯಕ ಅವರು ತಮ್ಮ ಅತ್ಮ ಅವಲೋಕನ ಮಾಡಿಕೊಂಡು ಇನ್ನೊಬ್ಬರ ಬಗ್ಗೆ ಮಾತನಾಡಲಿ ಎಂದು ಮೀಸಲು ವಿಧಾನ ಸಭಾ ಕ್ಷೇತ್ರದ ಅರಕೇರಾ ಹಾಗೂ ದೇವದುರ್ಗ ಬ್ಲಾಕ್ ಕಾಂಗ್ರೆಸ್ ಮುಖಂಡರ ಉಪಸ್ಥಿತಿಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಂಟಿಯಾಗಿ ಮಂಗಳವಾರದಂದು ಆಯೋಜಿಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಆದನಗೌಡ ಪಾಟೀಲ ಬುಂಕ್ಕಲದೊಡ್ಡಿ ಅವರು ಶ್ರೀದೇವಿ ರಾಜಶೇಖರ ನಾಯಕ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದರು,
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಾಂಗ್ರೆಸ್ ಪಕ್ಷದ ಮತ್ತು ಜಿಲ್ಲಾ ಪಂಚಾಯತನ ಮಾಜಿ ಅಧ್ಯಕ್ಷರಾದ ರಾಮಣ್ಣ ಇರಬಗೇರಾ ಮಾತನಾಡಿ ಸುಮಾರು ಇಪ್ಪತ್ತು ವರ್ಷಗಳಿಂದಲೂ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ ಯಾವತ್ತೂ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಜಿಲ್ಲಾ ಶಿಸ್ತು ಸಮಿತಿ ಕೂಡಲೇ ಸಮಿತಿ ನೇಮಿಸಿ ದೇವದುರ್ಗ ಕ್ಷೇತ್ರದಲ್ಲಿ ಯಾರಾರು ತಮ್ಮ ಸ್ವಾರ್ಥಕ್ಕಾಗಿ ಪಕ್ಷಕ್ಕೆ ದ್ರೋಹ ಮತ್ತು ಪಕ್ಷ ವಿರೋಧಿ ಕಾರ್ಯದಲ್ಲಿ ತೊಡಗಿದ್ದಾರೆ ಅನ್ನುವುದು ಮಾಹಿತಿ ಪಡೆದು ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ರಾಜ್ಯ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣ ಪ್ರಕಾಶ ಪಾಟೀಲ ಹಾಗೂ ಸಚಿವ ಎನ್ ಎಸ್ ಬೋಸರಾಜ್ ಅವರಿಗೆ ಪತ್ರಿಕಾಗೋಷ್ಠಿಯ ಮೂಲಕ ಒತ್ತಾಯಿಸಿದ್ದಾರೆ.
