ಉದಯವಾಹಿನಿ, ಮೈಸೂರು: ನಾಡಹಬ್ಬ ದಸರಾ ಉತ್ಸವದ ಅಂಗವಾಗಿ ನಗರದ ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ಅ.6ರಿಂದ 13ರವರೆಗೆ ಯುವ ಸಂಭ್ರಮ ಆಯೋಜಿಸಲಾಗಿದೆ ಎಂದು ಯುವ ಸಂಭ್ರಮ ಉಪಸಮಿತಿ ವಿಶೇಷಾಧಿಕಾರಿ ಹಾಗೂ ಎಸ್‍ಪಿ ಸೀಮಾ ಲಾಟ್ಕರ್ ತಿಳಿಸಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಮಹೋತ್ಸವದಲ್ಲಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪ್ರತಿಭೆ ಅನಾವಣರಣಕ್ಕೆ ಯುವ ಸಂಭ್ರಮ ಆಯೋಜಿಸುವ ಮೂಲಕ ವೇದಿಕೆ ಕಲ್ಪಿಸಲಾಗುತ್ತಿದೆ. ಅದರಂತೆ ಈ ಬಾರಿಯೂ ದಸರಾ ಮೊದಲ ಕಾರ್ಯಕ್ರಮವಾದ ಯುವ ಸಂಭ್ರಮವನ್ನು ಅ.6ರಿಂದ ಆಯೋಜಿಸಲಾಗುತ್ತಿದೆ. ಅಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಯುವ ಸಂಭ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ತಾರಾ ದಂಪತಿಯಾದ ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!