ಉದಯವಾಹಿನಿ, ಹೊಸಪೇಟೆ, : ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕೆ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರದ ತಂಡ ಶನಿವಾರ ಜಿಲ್ಲೆಗೆ ಆಗಮಿಸಲಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಬರ ಅಧ್ಯಯನದ ಎರಡನೇ ತಂಡವಾದ ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾ ರರಾದ ಡಿ. ರಾಜಶೇಖರ್ ನೇತೃತ್ವದಲ್ಲಿ ಪಶುಸಂಗೋಪನೆ ಇಲಾಖೆ ನಿರ್ದೇಶಕ ಆರ್.ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿರಾಂ, ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಕರೀಗೌಡ ಅವರ ನೇತೃತ್ವದ ತಂಡ ವಿವಿಧ ತಾಲ್ಲೂಕಿಗೆ ಭೇಟಿ ನೀಡಲಿದ್ದಾರೆ. ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಬರ ಅಧ್ಯಯನ ನಡೆಸಲಿದೆ.

Leave a Reply

Your email address will not be published. Required fields are marked *

error: Content is protected !!