
ಉದಯವಾಹಿನಿ ಚಿಂತಾಮಣಿ: ತಾಲೂಕಿನ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಕೇಂದ್ರ ಹಾಗೂ ಪುಣ್ಯ ತಾಣವಾಗಿರುವ ಮುರುಗಮಲ್ಲ ಗ್ರಾಮ ಪಂಚಾಯತಿಯಲ್ಲಿ ನರೇಗಾ ಅನುಷ್ಠಾನ, ಬಯಲು ಬಹಿರ್ದೆಸೆ ಮುಕ್ತ, ಸ್ವಚ್ಛತೆ ಮತ್ತು ನೈರ್ಮಲ್ಯ, ಕಂದಾಯ, ಅಭಿವೃದ್ಧಿ… ಹೀಗೆ ವಿವಿಧ ಕ್ಷೇತ್ರಗಳಲ್ಲಿಅತ್ಯುತ್ತಮ ಸಾಧನೆಗೈದ ಪಂಚಾಯತಿಯಾಗಿದ್ದು ರಾಜ್ಯಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹಾಜಿ ಅನ್ಸರ್ ಖಾನ್, ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸದಸ್ಯರುಗಳನ್ನು ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಿದ್ದಾರೆ.
