ಉದಯವಾಹಿನಿ, ಮುಂಬೈ: ಬಾಲಿವುಡ್ ಚಿತ್ರರಂಗದಲ್ಲಿ ಜೀವನಾಧರಿತ ಚಿತ್ರ ಮಾಡುವ ಟ್ರೆಂಟ್ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಅದರ ಸಾಲಿಗೆ ಹೊಸ ಸೇರ್ಪಡೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೀವನ ಕುರಿತು ಚಿತ್ರ ತೆರೆಗೆ ಬರಲು ಸಜ್ಜಾಗಿದೆ.
ತಮ್ಮ ಜೀವನಾಧರಿತ ಚಿತ್ರ ಬಿಡುಗಡೆಯ ದಿನಾಂಕವನ್ನು
ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದು ಇದೇ ತಿಂಗಳ ೨೭ ಕ್ಕೆ ಬಿಡುಗಡೆಯಾಗಲಿದೆ ಎಂದಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ತಮ್ಮ ಜೀವನ ಆಧಾರಿತ ಚಿತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ,, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಶಿವಸೇನೆಯ ಸಂಸ್ಥಾಪಕ ಬಾಳಸಾಹೇಬ್ ಠಾಕ್ರೆ ಸೇರಿದಂತೆ ಹಲವು ಪಾತ್ರಗಳು ಬರಲಿವೆ ಎಂದು ಅವರು ತಿಳಿಸಿದ್ದಾರೆ.
ಚಿತ್ರ ಮರಾಠಿ ಭಾಷೆಯಲ್ಲಿ ತೆರೆಗೆ ಬರಲು ಸಜ್ಜಾಗಿದೆ ಎಂದು ಹೆದ್ದಾರಿಗಳ ಮನುಷ್ಯ ಎಂದೇ ಖ್ಯಾತಿ ಪಡೆದಿರುವ ನಿತಿನ್ ಗಡ್ಕರಿ ಹೇಳಿದ್ದಾರೆ.
ತಮ್ಮ ಬಾಲ್ಯ ರಾಜಕೀಯ ಪ್ರವೇಶ ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಚಿತ್ರದ ಮೂಲಕ ಕಟ್ಟಿಕೊಡುವ ಕೆಲಸ ಮಾಡಲಾಗಿದೆ ಇದೇ ತಿಂಗಳ ಅಂತ್ಯದಲ್ಲಿ ಚಿತ್ರ ಬಿಡುಗಡೆಯಾಗಲಿದ್ದು ಎಲ್ಲರೂ ನೋಡಿ ಎಂದು ಅವರು ಮನವಿ ಮಾಡಿದ್ದಾರೆ.
ಚಿತ್ರವನ್ನು ಅನುರಾಗದ ಭೂಸಾರಿ ನಿರ್ದೇಶನ ಮಾಡಿದ್ದು ಅಕ್ಷಯ್ ದೇಶ್ ಮುಖ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಮಹಾರಾಷ್ಟ್ರದ ವಿದರ್ಭ ಭಾಗದ ಮೊದಲ ರಾಜಕೀಯ ನಾಯಕರ ಜೀವನದಾರಿತ ಚಿತ್ರ ಇದಾಗಿದೆ.
ಜನಸಂಘದ ಆರಂಭದ ಕಾಲದಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿ ಕೇಂದ್ರ ಸಚಿವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ ರೀತಿ ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಚಿತ್ರದ ಮೂಲಕ ಕಟ್ಟಿಕೊಡುವ ಕೆಲಸ ಮಾಡಲಾಗಿದೆ.
ಚಿತ್ರದ ಕುರಿತು ಆಸಕ್ತಿಕರ ಮಾಹಿತಿಗಳಿದ್ದು ಅವುಗಳನ್ನು ಚಿತ್ರ ಮಂದಿರದಲ್ಲಿ ನೋಡಬೇಕು ಎಂದು ಚಿತ್ರತಂಡ ಹೇಳಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!