ಉದಯವಾಹಿನಿ, ಕೋಲಾರ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಛತ್ರಕೋಡಿಹಳ್ಳಿ ರಾಜಣ್ಣ ಬಿನ್ ನಾರಾಯಣಪ್ಪ ರವರ ದೂರಿನ ಮೇರೆಗೆ ಮುಳಬಾಗಿಲು ತಾಲ್ಲೂಕಿನ ಕುವತನಹಳ್ಳಿ ಗ್ರಾಮದ ವಾಸಿ ವಿನಯ್ @ ವಿನೋದ್ ಕುಮಾರ್ ಬಿನ್ ರಘುಪತಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿದ ಆರೋಪವು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ ೨೦ವರ್ಷ ಸಜೆ ತೀರ್ಪು ನೀಡಿದ್ದಾರೆ.
ಸದರಿ ಆರೋಪಿಯ ವಿರುದ್ದ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) ೨೩/೨೦೨೨ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ವಿನಯ್ ವಿನೋದ್ ಕುಮಾರ್‌ಗೆ ಕಲಂ ೬ ಪೋಕ್ಸೋ ಕಾಯ್ದೆ ಅಡಿಯಲ್ಲಿ ೨೦ ವಷ ಸಜೆ ಜೊತೆಗೆ ರೂ.೫೦ ಸಾವಿರರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ ೬ ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.
