ಉದಯವಾಹಿನಿ, ಹೈದರಾಬಾದ್ : ನಯನತಾರಾ ದಕ್ಷಿಣ ಭಾರತದ ಅತ್ಯಂತ ಬ್ಯುಸಿ ನಟಿಯರಲ್ಲಿ ಒಬ್ಬರು. ಜವಾನ್ ನಂತರ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ರತ್ನ ಕುಮಾರ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ನಯನತಾರಾ ಮೊದಲ ಬಾರಿಗೆ ರಾಘವ ಲಾರೆನ್ಸ್ ಅವರೊಂದಿಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಆದರೆ, ಇತ್ತೀಚಿನ ವರದಿಯ ಪ್ರಕಾರ, ನಟಿ ಈಗ ಈ ಯೋಜನೆಯಿಂದ ಹಿಂದೆ ಸರಿದಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ದಿನಾಂಕಗಳ ಹೊಂದಾಣಿಕೆ ಆಗದೇ ಇರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಈಗ ರತ್ನ ಕುಮಾರ್ ಅವರು ರಾಘವ್ ಲಾರೆನ್ಸ್ ಅವರೊಂದಿಗೆ ತಮ್ಮ ಚಿತ್ರಕ್ಕಾಗಿ ಹೊಸ ಸ್ಕ್ರಿಪ್ಟ್ ತಯಾರಿಸುತ್ತಿದ್ದಾರೆ ಎಂದು ವರದಿಯಾಗಿದೆ.
