ಉದಯವಾಹಿನಿ, ಜೈಪುರ: ಬಿಹಾರದಲ್ಲಿ ನಡೆಸಿದ ಸಮೀಕ್ಷೆಯ ಮಾದರಿಯಲ್ಲಿ ತಮ್ಮ ಸರ್ಕಾರ ಸಮೀಕ್ಷೆಯನ್ನು ನಡೆಸಲಿದೆ ಎಂದು ಘೋಷಿಸಿದ ಒಂದು ದಿನದ ನಂತರ ಜಾತಿ ಆಧಾರಿತ ಜನಗಣತಿ ನಡೆಸಲು ಆದೇಶ ಹೊರಡಿಸಿದ್ದಾರೆ. ಬಿಹಾರದ ನಂತರ ಇದೀಗ ರಾಜಸ್ಥಾನ ಸರ್ಕಾರ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.
ಸರ್ಕಾರದ ಕಲ್ಯಾಣ ಯೋಜನೆಗಳು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ವಿವಿಧ ಜಾತಿಗಳ ಸ್ಥಿತಿಗತಿ ತಿಳಿಯಲು ಸರ್ಕಾರ ಜಾತಿ ಆಧಾರಿತ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ ಎಂದು ರಾಜಸ್ಥಾನ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಅಶೋಕ್ ಗೆಹ್ಲೋಟ್ ಹೇಳಿಕೆಯಲ್ಲಿ ತಮ್ಮ ಸರ್ಕಾರ ಬಿಹಾರದಲ್ಲಿ ಮಾಡಿದ ರೀತಿಯಲ್ಲಿ ಜಾತಿ ಗಣತಿಯನ್ನು ನಡೆಸಲಿದೆ ಎಂದು ಹೇಳಿದ್ದರು ಇದಾದ ಒಂದೇ ದಿನದಲ್ಲಿ ಜಾತಿ ಗಣತಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯಿಸಿ,ಜಾತಿ ಗಣತಿ ಕುರಿತು ಆದೇಶ ಹೊರಡಿಸಿರುವುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಭಿಪ್ರಾಯಗಳಿಗೆ ಪೂರಕವಾಗಿದೆ. ಜಾತಿ ಸಮೀಕ್ಷೆ ಮತ್ತು ಜನಸಂಖ್ಯೆಗೆ ಅನುಗುಣವಾಗಿ ಭಾಗವಹಿಸುವ ಅವರ ಪರಿಕಲ್ಪನೆಯನ್ನು ರಾಜ್ಯದಲ್ಲಿ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ
ಆದ್ದರಿಂದ, ಪಕ್ಷದ ಆದೇಶವನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನ ಸರ್ಕಾರ ಈ ಅಭಿಯಾನವನ್ನು ಘೋಷಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
