ಉದಯವಾಹಿನಿ, ನವದೆಹಲಿ: ಅಮರಾವತಿಯ ಇನ್ನರ್ ರಿಂಗ್ ರೋಡ್ ಹಗರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಇಂದು (ಸೋಮವಾರ) ವಜಾಗೊಳಿಸಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ನಾರಾ ಲೋಕೇಶ್ ವಿರುದ್ಧ ಸಿಐಡಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಕೌಶಲ ಅಭಿವೃದ್ಧಿ ಕಾರ್ಪೊರೇಷನ್‌ನಲ್ಲಿದ್ದ ಹಣ ದುರುಪಯೋಗದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ನಷ್ಟವಾಗಿದೆ. ಈ ಪ್ರಕರಣದಲ್ಲಿ ಸೆ.9ರಂದು ಬಂಧನವಾಗಿರುವ ಚಂದ್ರಬಾಬು ನಾಯ್ಡು ಅವರನ್ನು ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿ ಇಡಲಾಗಿದೆ.
