ಉದಯವಾಹಿನಿ, ನವದೆಹಲಿ: ಮಧಪ್ರದೇಶ ವಿಧಾನಸಭೆಗೆ ಮುಂದಿನ ತಿಂಗಳು ೧೭ ರಂದು ೨೩೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಹಿನ್ನೆಲೆಯಲ್ಲಿ ಮರಳಿ ಅಧಿಕಾರಕ್ಕೇರಲು ಆಡಳಿತಾರೂಢ ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸಿದೆ,ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ೫೭ ಅಭ್ಯರ್ಥಿಗಳ ತನ್ನ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಸೇರಿದಂತೆ ಪ್ರಮುಖರಿಗೆ ಅವಕಾಶ ಮಾಡಿಕೊಡಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಾಂಪ್ರದಾಯಿಕ ಸ್ಥಾನವಾದ ಬುಧ್ನಿಯಿಂದ ಮತ್ತೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗಿದೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ದಾತಿಯಾದಿಂದ, ಗೋಪಾಲ್ ಭಾರ್ಗವ ರೆಹ್ಲಿಯಿಂದ, ವಿಶ್ವಾಸ್ ಸಾರಂಗ್ ನರೇಲಾದಿಂದ ಮತ್ತು ತುಳಸಿರಾಮ್ ಸಿಲಾವತ್ ಸಾನ್ವೆರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಧ್ಯಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ ದಿನವೇ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಧ್ಯಪ್ರದೇಶದಲ್ಲಿ ನವೆಂಬರ್ ೧೭ ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ ೩ ರಂದು ಮತ ಎಣಿಕೆ ನಡೆಯಲಿದೆ.
ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಮೊದಲೇ ಘೋಷಿಸಿದೆ. ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಆಗಸ್ಟ್ ೧೭ ರಂದು ಬಿಡುಗಡೆ ಮಾಡಿತು, ಇದರಲ್ಲಿ ಸುಮಾರು ೩೯ ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು
ಎರಡನೇ ಪಟ್ಟಿಯನ್ನು ಸೆಪ್ಟೆಂಬರ್ ೨೫ ರಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮೂವರು ಕೇಂದ್ರ ಸಚಿವರು ಇದ್ದರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಉಕ್ಕಿನ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲತ್ಸೆ – ಮತ್ತು ಇತರ ನಾಲ್ಕು ಲೋಕಸಭಾ ಸಂಸದರು ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ. ರಂದು ಮತ ಎಣಿಕೆ ನಡೆಯಲಿದೆ.
