ಉದಯವಾಹಿನಿ, ಔರಾದ: ಪ್ರಪಂಚದ ಇತರೆ ದೇಶಗಳಿಗೆ ಹೋಲಿಸಿದಾಗ ನಮ್ಮ ದೇಶ ಸಾಂಸ್ಕೃತಿಕ ಪರಂಪರೆಯ ವೈಭವವನ್ನು ಹೊಂದಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ ಹೇಳಿದರು.
ಪಟ್ಟಣದ ಅಲ್ಪಸಂಖ್ಯಾತ ವಸತಿ ನಿಲಯದಲ್ಲಿ ಈಚೇಗೆ ಕರ್ನಾಟಕ ನಾಮಕರಣಗೊಂಡು 50 ವರ್ಷದ ಸಂಭ್ರಮದ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಸಹಯೋಗದಲ್ಲಿ ನಡೆದ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜನಪರ ಕಾಳಜಿಯ ಸಾಂಸ್ಕೃತಿಕ ಕಾರ್ಯಕ್ರಮ, ಉತ್ಸವಗಳಿಗೆ ಪೆÇ್ರ?ತ್ಸಾಹ ಅಗತ್ಯವಿದೆ. ಎಲ್ಲರೂ ಕಲಾವಿದರನ್ನು ನೀಡಬೇಕಿದೆ ಎಂದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ತಾವು ಇಟ್ಟುಕೊಂಡಿರುವ ಗುರಿ ಮುಟ್ಟುವವರೆಗೆ ಸತತ ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಾದ ಕು. ಆಸ್ಮಾ, ಕು. ದಿಲಸಾದ್ ಮಾತನಾಡಿ, ಪ್ರತಿಯೊಬ್ಬರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೆಂಬಲಿಸಬೇಕು. ಅಲ್ಲದೇ ನಾವುಗಳು ಕುಡಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು ಅಂದಾಗ ಪರಂಪರೆಗಳು ಉಳಿಯಲು ಸಾಧ್ಯ ಎಂದರು. ಈ ಸಂದರ್ಭದಲ್ಲಿ ಪತ್ರಕರ್ತ ಸುನಿಲ ಜಿರೋಬೆ, ಜೀವನ ಕೋಟೆ, ಮಮತಾಜ, ರತ್ನದೀಪ ಸೇರಿದಂತೆ ಅನೇಕರು ಪಾಲ್ಗೊಂಡರು. ಕಲಾವಿದ ಮಾರುತಿ, ರಂಜಿತ್ ಕಸ್ತೂರೆ ಹಾಡುಗಳು ಹಾಡುವ ಮೂಲಕ ಎಲ್ಲ ಗಮನ ಸೆಳೆದರು. ವಿದ್ಯಾರ್ಥಿಗಳಾದ ರಾಣಿ, ಸುನಿತಾ ಸ್ವಾಗತಿಸಿದರು.
