
ಉದಯವಾಹಿನಿ,ಚಿಂಚೋಳಿ: ಅ.23 ರಂದು ಕರ್ನಾಟಕ ಸರ್ಕಾರ ವತಿಯಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಮಾಡಲು ಆದೇಶ ಹೊರಡಿಸಲಾಗಿದ್ದು,ಕಾರಣತಾಲ್ಲೂಕಾಡಳಿ ತ ಹಾಗೂ ವಿವಿಧ ಇಲಾಖೆಯಲ್ಲಿ ಮತ್ತು ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ತಾಲೂಕಿನ ಎಲ್ಲಾ ಅಂಗನವಾಡಿಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಭಾವಚಿತ್ರವಿಟ್ಟು ಪೂಜೆ ಮಾಡಿ ಜಯಂತ್ಯೋತ್ಸವವನ್ನು ಆಚರಿಸಬೇಕು ಎಂದು ತಾಲ್ಲೂಕಾ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷ ಸಂಜೀವಕುಮಾರ ಪಾಟೀಲ್,ಸಂಜು ಪಾಟೀಲ ಯoಪಳ್ಳಿ,ವೀರಶೆಟ್ಟಿ ಮೋಘಾ,ಸಂತೋಷ ಪಾಟೀಲ ಮೋಘಾ,ಇದ್ದರು.
