ಉದಯವಾಹಿನಿ,ನವದೆಹಲಿ: ರಾಜಸ್ತಾನ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗಧಿಯಾಗಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ವಸುಂಧರೆ ರಾಜೇ ಅವರನ್ನು ಕಡೆಗಣಿಸಿರುವ ಬಿಜೆಪಿ ಹೈಕಮಾಂಡ್ ಇದೀಗ ಬೆಂಬಲಿಗರಿಗೂ ಟಿಕೆಟ್ ನೀಡಿಕೆಯೆಲ್ಲಿ ಕೈ ಕೊಟ್ಟಿದೆ.
ಕಳೆದ ಎರಡು ಮೂರು ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿ ಚುನಾವಣೆ ಎದುರಿದ್ದ ಬಿಜೆಪಿ ಹೈಕಮಾಂಡ್ ಈ ಬಾರಿ ಅವರನ್ನು ಕಡೆಗಣಿಸಿದೆ.
ಇದರ ಜೊತೆಗೆ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ೪೧ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ೩೧ ಮಂದಿ ಹೊಸಬರಿಗೆ ಟಿಕೆಟ್ ನೀಡಿದೆ. ಇದು ಬಿಜೆಪಿಯಲ್ಲಿ ಅತೃಪ್ತಿ ಅಸಮಧಾನಕ್ಕೆ ಕಾರಣವಾಇದೆ,
೩೧ ಹೊಸ ಮುಖಗಳನ್ನು ಕಣಕ್ಕಿಳಿಸಿರುವ ಬಿಜೆಪಿ ವಿಧಾನಸಭೆ ಚುನಾವಣೆಗೂ ಏಳು ಸಂಸದರಿಗೆ ಟಿಕೆಟ್ ನೀಡಿದೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ನಿಕಟವರ್ತಿಗಳೆಂದು ಪರಿಗಣಿಸಲಾದ ಅನೇಕ ನಾಯಕರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡದೆ ಕಡೆಗಣಿಸಲಾಗಿದೆ.
ಈಗಾಗಲೇ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂದಿರುವ ಮಾಜಿ ಮುಖ್ಯಮಂತ್ರಿ ವಸುಂಧರೆ ರಾಜೇ ಅವರ ಬೆಂಬಲಿಗರಿಗೂ ವಿಧಾನಸಭೆಯ ಚುನಾವಣೆಯ ಮೊದಲ ಪಟ್ಟಿಯಲ್ಲಿ ಅವಕಾಶ ಮಾಡಿಕೊಡದಿರುವುದು ಬೆಂಬಲಿಗರಲ್ಲಿ ಅಸಮಾಧನಕ್ಕೆ ಎಡೆ ಮಾಡಿಕೊಟ್ಟಿದೆ.

Leave a Reply

Your email address will not be published. Required fields are marked *

error: Content is protected !!