ಉದಯವಾಹಿನಿ, ಶಹಾಪೂರ: ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರ ನಾಡು ನುಡಿಯ ಕಾಳಜಿ ಹಾಗೂ ಸಾಹಿತ್ಯ ಪ್ರೀತಿ ಮತ್ತು ಪ್ರೇಮದಿಂದ ನಮ್ಮ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸ ನಿವೇಶನ ಮಂಜೂರಾಗಿದೆ ಎಂದು ಕಸಾಪ ಅಧ್ಯಕ್ಷ ಡಾ. ರವೀಂದ್ರನಾಥ ಹೊಸಮನಿ ಅವರು ಅಭಿಪ್ರಾಯವ್ಯಕ್ತಪಡಿಸಿದರು.ನಗರದ ಸಚಿವರ ಗೃಹ ಕಛೇರಿಯಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ವತಿಯಿಂದ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು ತಾಲೂಕಿನ ಹಾಗೂ ನಾಡಿನ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಚಿವರಿಗೆ ನಮ್ಮ ತಾಲೂಕ ಕಸಾಪ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದರು.
ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಮಾತನಾಡಿ ನೂತನ ನಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನ ಕಟ್ಟಡ ಅತ್ಯುತ್ತಮವಾಗಿ ನಿರ್ಮಿಸಲು ಎಲ್ಲಾ ರೀತಿಯಿಂದ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಣ್ಣನಿಂಗಪ್ಪ ನಾಯ್ಕೋಡಿ, ಬಸವರಾಜ ಹೆರುಂಡಿ, ಸಾಹಿತಿ ಶಿವಣ್ಣ ಇಜೇರಿ, ವಿಶ್ವರಾಧ್ಯ ಸತ್ಯಂಪೇಟ, ಬಸವರಾಜ ಹಿರೇಮಠ, ಸಾಯಬಣ್ಣ ಪುರ್ಲೆ, ಬಿ.ಎಮ್. ಪೂಜಾರಿ, ಡಾ. ಅಬ್ದುಲ್ ಕರೀಮ್ ಕನ್ಯೆಕೊಳೂರು, ಚಂದ್ರಕಲಾ ಗೂಗಲ್, ರೇಣುಕಾ ಚಟ್ರಕಿ, ಶಕುಂತಲಾ ಹಡಗಲಿ, ದೇವಿಂದ್ರಪ್ಪ ವಿಶ್ವಕರ್ಮ, ಸತೀಶ ತುಳೇರ, ನಿಂಗಣ್ಣ ತಿಪ್ಪನಳ್ಳಿ, ಶಿವಲಿಂಗಣ್ಣ ಸಾಹು, ಗೌರವ ಕಾರ್ಯದರ್ಶಿಗಳಾದ ಸುರೇಶಬಾಬು ಅರುಣಿ, ರಾಘವೇಂದ್ರ ಹಾರಣಗೇರಾ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!