ಉದಯವಾಹಿನಿ, ಹೊಸಕೋಟೆ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹೊಸಕೋಟೆ ಟೋಲ್ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.ಕನ್ನಡ ಚಳುವಳಿ ವಾಟಾಳ್ ಪಕ್ಷ ಸೇರಿದಂತೆ ಹಲವಾರು ಕನ್ನಡ ಪರ ಹಾಗೂ ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿ ಟೋಲ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿ ಕರ್ನಾಟಕಕ್ಕೆಅನ್ಯಾಯ ಆಗುತ್ತಿರುವ ಬಗ್ಗೆ ಸುಪ್ರಿಂಕೋರ್ಟ್ಗೆ ಮನವರಿಕೆ ಮಾಡಿಕೊಡುವ ಕೆಲಸ ರಾಜ್ಯ ಸರ್ಕಾರದಿಂದ ಆಗಿಲ್ಲ. ಪರಿಣಾಮವಾಗಿ ಪ್ರತಿ ದಿನ ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತಾಗಿದೆ.ಇದರಿ0ದ ಮಂಡ್ಯ ಮೈಸೂರು ಭಾಗದ ರೈತರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊ0ಡು ರಾಜ್ಯದ ಕಾವೇರಿ ನೀರಿನ ವಾಸ್ತವ ಪರಿಸ್ಥಿತಿ ಬಗ್ಗೆ ಸುಪ್ರಿಂಗೆ ಅರ್ಥೈಸಬೇಕಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ತಮಿಳುನಾಡಿನಲ್ಲಿ ಅ 11 ರಂದು ಹೋರಾಟ ಹಮ್ಮಿಕೊಂಡಿದೆ. ನಾವು ಕೂಡಕನ್ನಡ ಪರ ಸಂಘಟನೆಗಳ ವತಿಯಿಂದ ನೀರು ಬಿಡದಂತೆ ಒತ್ತಾಯಿಸಿ ರಾಜಭವನ ಮುತ್ತಿಗೆಯನ್ನು ಹಮ್ಮಿಕೊಂಡಿದ್ದೇವೆ ಎ೦ದು ತಿಳಿಸಿದರು. ಕನ್ನಡ ಸೇನೆ ಸಂಘಟನೆರಾಜ್ಯಾಧ್ಯಕ್ಷಕೆ.ಆರ್.ಕುಮಾರ್ ಮಾತನಾಡಿ, ಕಾವೇರಿ ನೀರಿಗಾಗಿರೈತರು, ಸಂಘಟನೆಗಳು ಹಲವಾರು ದಿನಗಳಿಂದ ವಿಭಿನ್ನವಾಗಿ ಪ್ರತಿಭಟನೆ ಮಾಡುತ್ತಿದ್ದರೂ ಸಹ ಸರ್ಕಾರ ಪ್ರತಿಭಟನೆಗೆ ಸೊಪ್ಪು ಹಾಕುತಿಲ್ಲ. ಬದಲಾಗಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ.ಇದೇ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ವಿಪಕ್ಷ ಸ್ಥಾನದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ವಿಚಾರವಾಗಿ ಪಾದಯಾತ್ರೆ ಮಾಡಿದ್ರು. ಆದರೆ ಈಗ ಕಾವೇರಿ ನೀರನ್ನು ನಿಲ್ಲಿಸಲು ಆಗದಿರುವುದು ತಲೆತಗ್ಗಿಸುವ ವಿಚಾರ. ಆದ್ದರಿಂದ ಕಾವೇರಿ ನೀರು ನಮ್ಮ ಹಕ್ಕು ಮೊದಲು ನಮಗೆ ದಕ್ಕಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!