ಉದಯವಾಹಿನಿ,ದೇವದುರ್ಗ: ದೇಶದ ಪ್ರಗತಿಗೆ ಮಣ್ಣು ಸಂಗ್ರಹಿಸಲು ನಮ್ಮೆಲ್ಲರ ಜವಬ್ದಾರಿ ಎಂದು ಶಾಸಕಿ ಕರೆಮ್ಮ ಗೋಪಾಲಕೃಷ್ಣ ಹೇಳಿದರು. ಸಮೀಪದ ಮಾನಸಗಲ್ ಗ್ರಾಮದ ಕಲ್ಯಾಣ ಮಂಟಪದಲ್ಲಿ ತಾಪಂಯಿಂದ ಹಮ್ಮಿಕೊಂಡಿದ್ದ, ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೆಹಲಿಯಲ್ಲಿ ಅಮೃತ ಮಹೋತ್ಸವ ಹಿನ್ನೆಲೆ ಉದ್ಯಾನ್ ನಿರ್ಮಾಣ ಮಾಡುತ್ತಿರುವುದ್ದರಿಂದ ತಾಲೂಕಿನಿಂದ ಪ್ರತಿಯೊಂದು ಮನೆಯಿಂದ ಮಣ್ಣು ಸಂಗ್ರಹಿಸಿ ಕಳಿಸಲು ಎಲ್ಲರ ಜವಬ್ದಾರಿ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳು ಮಾಡುವುದ್ದರಿಂದ ಉತ್ತಮ ಸಂದೇಶ ಜನರಿಗೆ ತಿಳಿಸಲಾಗುತ್ತಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಪ್ರತಿಯೊಂದು ಮನೆಯಿಂದ ಮಣ್ಣು ಸಂಗ್ರಹಿಸುವ ಜತೆ ಉತ್ತಮ ಕೆಲಸಕ್ಕೆ ಪೂರಕ ಸ್ಪಂದಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಸೇವೆ ನೀಡಬೇಕು ಎಂದು ಹೇಳಿದರು. ಈಗಾಗಲೇ ಮನೆ ಮನೆಗೆ ಭೇಟಿ ನೀಡಿ, ಮಣ್ಣುನ್ನು ಕಳಸದಲ್ಲಿ ಸಂಗ್ರಹಿಸಲಾಗಿತ್ತು. ರಾಜ್ಯ ಮತ್ತು ಕೇಂದ್ರ ಸರಕಾರ ಜಾರಿಗೆ ತರುವಂತ ಹಲವು ಯೋಜನೆಗಳು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ತಾಲೂಕು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ಅಧಿಕಾರಿಗಳು ಕೈಜೋಡಿಸಬೇಕು ಎಂದು ಹೇಳಿದರು. ಕೇಂದ್ರ ಸ್ಥಾನದಲ್ಲಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಂತ ಗ್ರಾಮಕ್ಕೆ ನೀರು ಪೂರೈಸಲು ನಿಗಾವಹಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶರಣಪ್ಪ ಬಳೆ, ತಾಪಂ ಇಒ ರಾಮರೆಡ್ಡಿ ಪಾಟೀಲ್, ಸಹಾಯಕ ನಿರ್ದೇಶಕ ಅಣ್ಣರಾವ್, ಗ್ರಾಪಂ ಅಧ್ಯಕ್ಷೆ ಸೇರಿ ಇತರರು ಇದ್ದರು.
