ಉದಯವಾಹಿನಿ, ಬೀದರ್: ತಾಲ್ಲೂಕಿನ ಯಾಕತಪುರ ಗ್ರಾಮದ ಯುವ ಮುಖಂಡ ನರಸಪ್ಪ ಜಾನಕನೋರ ಅವರನ್ನು ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಸಂಸ್ಥೆ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನರಸಪ್ಪ ಅವರು ಒಂದೂವರೆ ದಶಕದಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದಾರೆ. ಎರಡನೇ ಬಾರಿಗೆ ನಾಗೋರಾ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದಾರೆ. ಪ್ರಸ್ತುತ ಪಂಚಾಯಿತಿ ಉಪಾಧ್ಯಕ್ಷರಾಗಿದ್ದಾರೆ.
