
ಉದಯವಾಹಿನಿ ಕೋಲಾರ : ತಾಲೂಕಿನ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬೈರಂಡಹಳ್ಳಿ ಗ್ರಾಮದಲ್ಲಿ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು .ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚನ್ನಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದೀಪ ಎಸ್ ರಾಮೇಗೌಡ ದೇಶದಲ್ಲಿ ನರೇಂದ್ರ ಮೋದಿಜಿ ಸರ್ಕಾರ ಬಡವರ ಆರೋಗ್ಯದ ಹಿತ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಇಂತಹ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದ ಬಡ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜೊತೆಗೆ ರಾಜ್ಯದಲ್ಲಿರುವ ಹಲವು ಖಾಸಗಿ ಆಸ್ಪತ್ರೆಗಳಿಂದ ಗ್ರಾಮೀಣ ಜನತೆಗೆ ಉಚಿತವಾಗಿ ಹೃದಯ ರೋಗ ತಪಾಸಣೆ, ರಕ್ತದೊತ್ತಡ, ಮದುಮೇಹ, ಕ್ಯಾನ್ಸರ್, ಇನ್ನು ಮುಂತಾದ ಕಾಯಿಲೆಗಳಿಗೆ ಉಚಿತವಾಗಿ ತಪಾಸಣೆ ಮಾಡಿ ನೀಡುತ್ತಿರುವುದು ತುಂಬಾ ಹೆಮ್ಮೆಯ ವಿಷಯ ಈ ದೇಶಕ್ಕೆ ಅನ್ನ ಕೊಡುತ್ತಿರುವನು ರೈತರು ಇಂತಹ ರೈತರ ಆರೋಗ್ಯವನ್ನು ಉತ್ತಮವಾಗಿರಬೇಕೆಂದರೆ ತಮ್ಮ ಗ್ರಾಮಗಳಲ್ಲೇ ಆರೋಗ್ಯ ತಪಾಸಣೆ ಮಾಡುವುದರಿಂದ ರೈತರಿಗೆ ಒಳ್ಳೆಯದಾಗುತ್ತದೆ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಮಾಡಿಸುತ್ತೇನೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಬೈರಂಡಹಳ್ಳಿ ಶಾಲೆಯ ಮುಖ್ಯ ಶಿಕ್ಷಕರಾದ ಎನ್ ಎಂ ಮುನಿರಾಜು, ಬ್ಯಾಪ್ಟಿಸ್ಟ್ ವೈದ್ಯಾಧಿಕಾರಿ ಕ್ಯಾರೋಲಿನ್, ಶಿವಾನಂದ, ಚನ್ನಸಂದ್ರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿಕುಮಾರ್, ಸಿ ನಾರಾಯಣಸ್ವಾಮಿ ಕಡಗಟ್ಟೂರು ದೇವರಾಜ್ , ಕಾಮಂಡಳ್ಳಿ ಸುರೇಶ್, ರಾದಮ್ಮ ನಾಗೇಶ್ , ನಾಗೇಶ,ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
