ಉದಯವಾಹಿನಿ, ಹುಬ್ಬಳ್ಳಿ, : ಬಿಜೆಪಿಯಲ್ಲಿ ಪರಿಸ್ಥಿತಿ ಸರಿ ಇಲ್ಲ, ಅದು ಅಧೋಗತಿಗೆ ಹೋಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯರಾದ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಎದ್ದುಕಾಣುತ್ತಿದೆ ಎಂದು ನುಡಿದರು.
ಮುಂಬರುವ ದಿನಗಳಲ್ಲಿ ಸಾಕಷ್ಟು ಜನ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ., ಸ್ವಇಚ್ಛೆಯಿಂದ ಕಾಂಗ್ರೆಸ್‍ಗೆ ಸೇರ್ಪಡೆಯಾಗಬಯಸುವವರನ್ನು ಸೇರ್ಪಡೆಗೊಳಿಸಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತಂತೆ ಈಗಾಗಲೇ ಭಿನ್ನಮತ ಆರಂಭವಾಗಿದ್ದು ಎರಡೂ ಪಕ್ಷಗಳಿಗೂ ಇದು ಒಳ್ಳೆಯದಲ್ಲ ಎಂದು ಶೆಟ್ಟರ್ ಹೇಳಿದರು.
