
ಉದಯವಾಹಿನಿ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಆದೇಶಿಸಿತ್ತು. ಈ ಆದೇಶ ಖಂಡಿಸಿ ನಾಳೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಕರಾಳ ದಿನ ಆಚರಣೆ ಮಾಡಲಾಗುತ್ತಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಕಾವೇರಿ ಪ್ರಾಧಿಕಾರ, ಕಾವೇರಿ ನಿರ್ವಹಮಾ ಸಮಿತಿ ನಮಗೆ ತೀವ್ರವಾಗಿ ಅನ್ಯಾಯ ಮಾಡಿದ್ದಾರೆ. ಕೇಂದ್ರ ಸರ್ಕಾರ ನಮ್ಮನ್ನು ಕಡೆಗಣಿಸಿದ್ದಾರೆ. ನಮ್ಮ ಲೋಕಸಭಾ ಸದಸ್ಯರು ಸಂಪೂರ್ಣ ವಿಫಲರಾಗಿದ್ದಾರೆ. ರಾಜ್ಯ ಸರ್ಕಾರ ಯಾವ ಅಡ್ಡಿ ಆತಂಕವಿಲ್ಲದೇ ನೀರನ್ನು ಬಿಡುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.ದಿನಾಂಕ 16-10-2023ರ ಸೋಮವಾರದಂದು ಮಧ್ಯಾಹ್ನ 12 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆ ಹಾಗೂ ಕಪ್ಪುಬಾವುಟ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ ಅಂತ ತಿಳಿಸಿದ್ದಾರೆ.
