ಉದಯವಾಹಿನಿ ಬೆಂಗಳೂರು: ನಗರದಲ್ಲಿ ಆನ್ ಲೈನ್ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಂತ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ಆನ್ ಲೈನ್ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಂತ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆನ್ ಲೈನ್ ವೇಶ್ಯಾವಾಟಿಕೆಯಲ್ಲಿ ತೊಡಗಿರೋ ಖಚಿತ ಮಾಹಿತಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳಕ್ಕೆ ಸಿಕ್ಕಿತ್ತು.ಈ ಖಚಿತ ಮಾಹಿತಿಯನ್ನು ಆಧರಿಸಿ ಅಡ್ಡೆಯ ಮೇಲೆ ದಾಳಿಯನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದಿಂದ ನಡೆಸಲಾಗಿದೆ. ಈ ದಾಳಿಯ ವೇಳೆಯಲ್ಲಿ ಆನ್ ಲೈನ್ ವೇಶ್ಯವಾಟಿಕೆಯಲ್ಲಿ ತೊಡಗಿದ್ದಂತ ಮಂಜುನಾಥ್, ಶಿವರಾಜ್, ಉಮೇಶ್, ಬಸವರಾಜ್, ರಾಯ ಹಾಗೂ ಪ್ರದೀಪ್ ಎಂಬ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!