
ಉದಯವಾಹಿನಿ ರಾಯಚೂರು : ರಾಜ್ಯ ಕಾಂಗ್ರೆಸ್ ಆಡಳಿತದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದು ಇಂದು ಅವರು ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಗ್ಯಾರಂಟಿ ಕೊಡುತ್ತೇನೆ ಅಂತ ಹೇಳಿ ಖಜಾನೆ ಖಾಲಿ ಮಾಡಿದ್ದಾರೆ. ರಸ್ತೆ ಕಾಮಗಾರಿ ನೀರಾವರಿ ಯೋಜನೆಗಳಿಗೆ ಅನುದಾನ ನೀಡುತ್ತಿಲ್ಲ. ಸರ್ಕಾರ ದಿವಾಳಿಯಾಗಿದೆ ಅಂತ ಅವರೇ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿದೆ. ನಮ್ಮ ಸರ್ಕಾರ ಇದ್ದಾಗ ಗುತ್ತಿಗೆದಾರರು ಆರೋಪ ಮಾಡಿದ್ದರು. ಈಗಲೂ ಗುತ್ತಿಗೆದಾರರು ನೇರವಾಗಿ ಆರೋಪ ಮಾಡುತ್ತಿದ್ದಾರೆ.ಕೆಲಸ ಕಾರ್ಯ ನಿಲ್ಲಿಸುತ್ತೇವೆ ಅಂತ ಗುತ್ತಿಗೆದಾರರು ಹೇಳುತ್ತಿದ್ದಾರೆ. ಎಂದು ರಾಯಚೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಿದ್ಯುತ್ ಕಣ್ಣ ಮುಚ್ಚಾಲೆಯಿಂದ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಹಿತವನ್ನು ಸಂಪೂರ್ಣ ಮರೆತಿದೆ. ಬೇರೆ ಕಡೆ ವಿದ್ಯುತ್ ಖರೀದಿ ಮಾಡಿ ಸಮಸ್ಯೆ ಬಗೆಹರಿಸಬೇಕು. ನಮ್ಮ ಅವಧಿಯಲ್ಲಿ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಿದ್ದೆವು. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ರಾಯಚೂರಿನಲ್ಲಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಆಗ್ರಹ ವಿಚಾರವಾಗಿ ಮಾತನಾಡಿದ ಅವರು, ಈ ವಿಷಯದ ಕುರಿತಾಗಿ ಸರ್ಕಾರ ಚಿಂತನೆ ಮಾಡಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಿ. ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ.ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲುವ ಗುರಿ ಇದೆ. ಶೀಘ್ರದಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ನೇಮಕವಾಗಲಿದೆ ಎಂದು ತಿಳಿಸಿದರು.
