
ಉದಯವಾಹಿನಿ ರಾಮನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಾಮನಗರ ತಾಲೂಕು ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಮಂಜುನಾಥ ಕನ್ವೆನ್ಷನ್ ಹಾಲ್ ಬಿಡದಿಯಲ್ಲಿ ಮಂಗಳವಾರ ನಡೆಯಿತು.ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಮಂಜುನಾಥ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಜಯಕರ ಶೆಟ್ಟಿ ಇವರು ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮತ್ತು ಜ್ಞಾನ ವಿಕಾಸ ಕೇಂದ್ರದಿಂದ ಮಹಿಳೆಯರಿಗೆ ಸಿಗುವ ಮಾಹಿತಿ ಹಾಗೂ ಮಾನಸಿಕ ನೆಮ್ಮದಿ ಬಗ್ಗೆ ಮಾಹಿತಿ ನೀಡಿದರು.ಅತಿಥಿಯಾಗಿ ಭರತ್ ಕೆಂಪಣ್ಣ ಆಸ್ಪತ್ರೆಯ ಡಾ.ಐಶ್ವರ್ಯ ರವರು ಮಾತನಾಡಿ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಯಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆ ಡಾ. ವರ್ಷ ರವರು ಮಹಿಳೆಯರಿಗೆ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದರು.ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಚಿಕ್ಕಣ್ಣಯ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಯೋಜನಾಧಿಕಾರಿಯದ ಮುರಳೀಧರ್, ಚಂದ್ರು ಲ್ಯಾಬ್ ಸೆಂಟರ್ ಮಾಲಿಕರಾದ ಚಂದ್ರು, ಮೇಲ್ವಿಚಾರಕರಾದ ಮಂಜುಳಾ, ಜ್ಞಾನ ವಿಕಾಸ ಅಧಿಕಾರಿಯಾದ ಉಷಾ ಕಲ್ಯಾಣಿ, ಕೇಂದ್ರದ ಸೇವಾ ಪ್ರತಿನಿಧಿಗಳು ಸೇರಿದಂತೆ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು
